ಮಾರ್ಚ್ 26, 27ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೇ 26 ಮತ್ತು 27ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೇ 26 ಮತ್ತು 27ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ರಾಯಚೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ದಕ್ಷಿಣ ಒಳನಾಡುಗಳಲ್ಲಿ 26ರಂದು ಮಳೆಯಾಗಲಿದೆ.

ಮಾರ್ಚ್ 28ರವರೆಗೆ ರಾಜ್ಯದ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com