ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿ, ಸರ್ ಎಂ ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿಗೆ ಬಂದಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ
ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.
Published: 25th March 2023 12:24 PM | Last Updated: 25th March 2023 04:15 PM | A+A A-

ಪ್ರಧಾನಿ ಮೋದಿ
ಬೆಂಗಳೂರು: ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.
ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಜನತೆಯನ್ನುದ್ದೇಶಿಸಿ ಮೋದಿಯವರು ಮಾತನಾಡಿದರು.
ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿಯವರು, ಕನ್ನಡ ಭಾಷೆ ಹಾಗೂ ಚಿಕ್ಕಬಳ್ಳಾಪುರವನ್ನು ಕೊಂಡಾಡಿದರು.
ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ ಅವರು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ ಎಂದು ಹೇಳಿದರು.
ಬಡವರ ಅಭಿವೃದ್ಧಿಯೇ ಬಿಜೆಪಿಯ ಪರಮೋಚ್ಛ ಗುರಿಯಾಗಿದೆ. ಆಯುಷ್ಮಾನ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪ ನಮನ, ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ
ಬಿಜೆಪಿ ಸರ್ಕಾರ ದೇಶದ ಅಭಿವೃದ್ದಿಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಡಿಮೆ ಸಮಯದಲ್ಲಿ ದೇಶದ ಅಭಿವೃದ್ಧಿ ಆಗುತ್ತಿದೆ. ಸಾಮಾಜಿಕ ಸಂಘಟನೆಗೂ ಸರ್ಕಾರ ಶ್ರಮಿಸುತ್ತಿದೆ. ದಲಿತ, ಬಡವ ಎಲ್ಲಾ ವರ್ಗದ ಜನರ ಸಶಕ್ತೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಇತ್ತೀಚಿಗ ಮೆಡಿಕಲ್ ಕಾಲೇಜುಗಳ ಉದ್ಘಾಟನೆಯಾಗುತ್ತಿದೆ. ಕನ್ನಡ ಭಾಷೆ ದೇಶದಲ್ಲಿ ಸಮೃದ್ಧ ಭಾಷೆಯಾಗಿದೆ. ಕನ್ನಡದಲ್ಲೂ ಮೆಡಿಕಲ್ ಶಿಕ್ಷಣ ಇರಬೇಕು. ಬಿಜೆಪಿ ಬಡವರ ಸೇವೆಗೆ ಸದಾ ಸಿದ್ದವಾಗಿದೆ' ಎಂದು ಮೋದಿ ಅವರು ಕನ್ನಡ ಭಾಷೆಯನ್ನು ಹಾಡಿ ಹೊಗಳಿದರು.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಆರೋಗ್ಯದ ಜೊತೆಗೆ ಮಹಿಳೆಯರ ಕಲ್ಯಾಣ ನಮ್ಮ ಸರ್ಕಾರದ ಗುರಿ. ಗ್ರಾಮಗಳಲ್ಲಿ ಮಹಿಳಾ ಸಂಘಗಳ ಮೂಲಕ ಮಹಿಳೆಯರ ಸಶಕ್ತೀಕರಣವಾಗುತ್ತಿದೆ ಎಂದು ಮೋದಿ ಹೇಳಿದರು. ಅಲ್ಲದೆ, ಸಾಯಿಬಾಬಾ ಜೊತೆ ನನಗೆ ನಿಕಟ ಸಂಬಂಧ ಇತ್ತು ಎಂದು ತಿಳಿಸಿದರು.
ವಿಪಕ್ಷಗಳ ವಿರುದ್ಧ ಕಿಡಿ
ಇದೇ ವೇಳೆ ಬೆಂಬಲ ನೀಡದೆ ಭಾಷೆ ಹಿಡಿಗು ಆಟವಾಡುವ ರಾಜಕೀಯ ಪಕ್ಷಗಳ ವಿರುದ್ಧ ಮೋದಿಯವರು ಕಿಡಿಕಾರಿದರು. ಈ ಪಕ್ಷಗಳು ಹಳ್ಳಿಗಳಿಂದ ಬಂದ ವಿದ್ಯಾರ್ಥಿಗಳು, ಬಡವರು ಮತ್ತು ಹಿಂದುಳಿದ ವರ್ಗದ ಕುಟುಂಬಗಳ ವೈದ್ಯರು, ಎಂಜಿನಿಯರ್ ಗಳಾಗುವುದನ್ು ಬಯಸುವುದಿಲ್ಲ ಎಂದು ಆರೋಪಿಸಿದರು.
ಹಳ್ಳಿಗಳಿಂದ ಬಂದ ಯುವಕರು ಮತ್ತು ಬಡ ಕುಟುಂಬದವರು ವೈದ್ಯಕೀಯ ವೃತ್ತಿಗೆ ಸೇರಲು ಎದುರಿಸುತ್ತಿರುವ ಸವಾಲುಗಳನ್ನು ಎತ್ತಿ ಹೇಳಿದ ಮೋದಿಯವರು, ಬಿಜೆಪಿ ಸರ್ಕಾರವು ಈ ವಿಷಯಗಳನ್ನು ಅರ್ಥಮಾಡಿಕೊಂಡು ಕನ್ನಡ ಸೇರಿದಂತೆ ಭಾರತೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶವನ್ನು ಒದಗಿಸಿದೆ ಎಂದು ಹೇಳಿದರು.
ಇದನ್ನೂ ಓದಿ: ಚುನಾವಣೆ ಬಂದಾಗ ಚರಂಡಿ ಉದ್ಘಾಟನೆಗೂ ರಾಜ್ಯಕ್ಕೆ ಬರಲು ತಯಾರಾಗುವ ಮೋದಿಯವರಿಗೆ ನಾಚಿಕೆಯಾಗಬೇಕು: ಕಾಂಗ್ರೆಸ್
ಕೆಲವು ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಮತ್ತು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಭಾಷೆಗಳನ್ನು ಹಿಡಿದು ಆಟವಾಡುತ್ತಿವೆ. ಆದರೆ, ಅವರನ್ನು ಬೆಂಬಲಿಸುವ ಕೆಲಸಗಳನ್ನು ಮಾಡಲಿಲ್ಲ. ಕನ್ನಡವು ಸಮೃದ್ಧ ಭಾಷೆಯಾಗಿದೆ, ಇದು ದೇಶದ ಹೆಮ್ಮೆಯನ್ನು ಹೆಚ್ಚಿಸುವ ಭಾಷೆಯಾಗಿದೆ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ತಾಂತ್ರಿಕ ಶಿಕ್ಷಣವನ್ನು ಕನ್ನಡದಲ್ಲಿಯೂ ಕಲಿಸುವತ್ತ ಹಿಂದಿನ ಸರ್ಕಾರಗಳು ಕ್ರಮಕೈಗೊಳ್ಳಲಿಲ್ಲ. ಆದರೆ, ಅಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಿತು. ಸರ್ಕಾರವು ಕನ್ನಡ ಸೇರಿದಂತೆ ಭಾರತೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣದ ಆಯ್ಕೆಯನ್ನು ನೀಡಿದೆ ಎಂದು ತಿಳಿಸಿದರು.
ಬಡವರನ್ನು ಕೇವಲ ವೋಟ್ ಬ್ಯಾಂಕ್ ಆಗಿ ನೋಡುವ ಇಂತಹ ರಾಜಕೀಯ ದೇಶದಲ್ಲಿ ಹಿಂದಿನಿಂದಲೂ ಇತ್ತು ಎಂದ ಪ್ರಧಾನಿ, ''ಆದರೆ ಬಿಜೆಪಿ ಸರಕಾರಕ್ಕೆ ಬಡವರ ಸೇವೆಯೇ ಪರಮೋಚ್ಚ ಕರ್ತವ್ಯ. ನಾವು ಆದ್ಯತೆ ನೀಡಿದ್ದೇವೆ. ಬಡ ಮತ್ತು ಮಧ್ಯಮ ವರ್ಗದವರ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ನಾವು ಅಗ್ಗದ ಔಷಧಿಗಳನ್ನು ಒದಗಿಸಲು 'ಜನೌಷದಿ ಕೇಂದ್ರ'ಗಳನ್ನು ತೆರೆದಿದ್ದೇವೆ. ಬಡವರ ಸೇವೆಯೇ ಪರಮೋಚ್ಚ ಕರ್ತವ್ಯ ಎಂದು ಬಿಜೆಪಿ ನಂಬಿದೆ. ಅವರಿಗೆ ಆದ್ಯತೆ ನೀಡಿದ್ದೇವೆ. ಬಡ ಮತ್ತು ಮಧ್ಯಮ ವರ್ಗದವರ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ನಾವು ಅಗ್ಗದ ಔಷಧಿಗಳನ್ನು ಒದಗಿಸಲು 'ಜನೌಷದಿ ಕೇಂದ್ರ'ಗಳನ್ನು ತೆರೆದಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಆರೋಗ್ಯ ಸಚಿವ ಕೆ ಸುಧಾಕರ್ ಮತ್ತು ಮಧುಸೂದನ್ ಸಾಯಿ ಇತರರು ಉಪಸ್ಥಿತರಿದ್ದರು.