ಚುನಾವಣೆಗೆ ಸಿದ್ಧತೆ: ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದು!

ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದು, ಸದ್ಯದಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದು, ಸದ್ಯದಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ.

ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸುತ್ತೋಲೆ ಹೊರಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ನಿಯಮ ಉಲ್ಲಂಘನೆ ಆಗದಂತೆ ಆಯಾ ವಲಯದ ನೋಡಲ್ ಅಧಿಕಾರಿಗಳು ನಿಗಾವಹಿಸಬೇಕು. ಬ್ಯಾನರ್ ಮಾಡುವ, ಕಟ್ಟುವವರ ವಿರುದ್ಧ ಕಾರ್ಯಾಚರಣೆ ನಡೆಸಿ, ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಬಟಿಂಗ್ಸ್ ಇತ್ಯಾದಿಗಳನ್ನು ತೆಗೆದುಹಾಕಲು ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನು ಪಾಲಿಕೆ ಕಾಯ್ದೆಯ ಸೆಕ್ಷನ್ 254 ರ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com