
ಗುಡ್ಡ ಕುಸಿತದ ದೃಶ್ಯ
ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳೂರಿನ ಸುಳ್ಯದ ಗಾಂಧಿ ನಗರ ಸಮೀಪ ನಡೆದಿದೆ.
ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮೃತ ಕಾರ್ಮಿಕ ದಂಪತಿ ಗದಗ ಜಿಲ್ಲೆಯ ಮುಂಡರಗಿ ನಿವಾಸಿಗಳಾದ 45 ವರ್ಷದ ಸೋಮಶೇಖರ ರೆಡ್ಡಿ ಮತ್ತು 40 ವರ್ಷದ ಶಾಂತ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬೆಂಗಳೂರು: ಬಸ್ ನಲ್ಲಿ ಕಂಡಕ್ಟರ್ ಸಾವು ಪ್ರಕರಣಕ್ಕೆ ಟ್ವಿಸ್ಟ್; ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ ಪೊಲೀಸರು; ಮುಂದುವರಿದ ತನಿಖೆ
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ಜೆಸಿಬಿ ಮೂಲಕ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಶವಗಳನ್ನು ರವಾನಿಸಲಾಗಿದೆ.