ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಅರ್ಚಕರಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್‌, ವೈದ್ಯಕೀಯ ಕಾಲೇಜು ಮತ್ತು ಇತರೆ ಪೂರಕ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. 
ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಬೊಮ್ಮಾಯಿ
ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಬೊಮ್ಮಾಯಿ

ರಾಮನಗರ: ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್‌, ವೈದ್ಯಕೀಯ ಕಾಲೇಜು ಮತ್ತು ಇತರೆ ಪೂರಕ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. 

ಇದೇ ಸಂದರ್ಭದಲ್ಲಿ ಚನ್ನಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ, ಬೈರಾಪಟ್ಟಣದಲ್ಲಿ ನಿರ್ಮಿಸುತ್ತಿರುವ ಮಾವು ಮತ್ತು ಇತರ ಉತ್ಪನ್ನಗಳ ಸಂಸ್ಕರಣಾ ಘಟಕದ ಶಂಕು ಸ್ಥಾಪನೆ ನೆರವೇರಿಸಲಾಯಿತು.ರಾಮನಗರ-ಚನ್ನಪಟ್ಟಣ ಹೆದ್ದಾರಿಯಲ್ಲಿರುವ ಕೆಎಸ್‌ಐಸಿ ಮಾರಾಟ ಮಳಿಗೆ ಉನ್ನತೀಕರಿಸಲಾಗಿದೆ.ಈ ಮಾರಾಟ ಮಳಿಗೆಗೆ ಆಗಮಿಸುವ ಗ್ರಾಹಕರಿಗೆ ಅನುಕೂಲವಾಗುವಂತೆ ರೆಸ್ಟೋರೆಂಟ್‌ ನಿರ್ಮಾಣ ಮಾಡಲಾಗಿದ್ದು, ಇದನ್ನು ಸಹ ಉದ್ಘಾಟಿಸಲಾಯಿತು.

ಜಲ ಜೀವನ್‌ ಮಿಷನ್‌ ಯೋಜನೆಯಡಿ ರಾಮನಗರ ತಾಲೂಕಿನ 250 ಜನವಸತಿ ಹಾಗೂ ಮಾಗಡಿ ತಾಲೂಕಿನ 625 ಜನವಸತಿಗಳಿಗೆ ಮಂಚನಬೆಲೆ ಜಲಾಶಯದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ವೈಜಿ ಗುಡ್ಡ ಕೆರೆಯಿಂದ ರಾಮನಗರ ತಾಲೂಕಿನ 94 ಜನವಸತಿ ಹಾಗೂ ಮಾಗಡಿ ತಾಲೂಕಿನ 72 ಜನವಸತಿಗಳಿಗೆ ಕುಡಿಯುವ ನೀರಿನ ಯೋಜನೆ, ಕನಕಪುರ ತಾಲೂಕಿನ ದೊಡ್ಡಮರಳವಾಡಿ ಮತ್ತು ಇತರೆ 256 ಜನವಸತಿಗಳಿಗೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ 77 ಜನವಸತಿಗಳು ಹಾಗೂ ಆನೇಕಲ್‌ ತಾಲೂಕಿನ 97 ಜನವಸತಿಗಳಿಗೆ ಇಗ್ಗಲೂರು ಜಲಾಶಯದಿಂದ ಬಹುಗ್ರಾಮ ಕುಡಿಯುವ ನೀರು ಕಲ್ಪಿಸುವ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತನ್ನು ವಿತರಿಸಲಾಯಿತು. ರಾಮನಗರ ಜಿಲ್ಲೆಯ ಆರೋಗ್ಯ, ಶಿಕ್ಷಣ ಹಾಗೂ ಉದ್ಯೋಗ ವಲಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜಿಲ್ಲೆಯ ರೇಷ್ಮೆ ಬೆಳೆಗಾರರು ಹಾಗೂ ಮಾವು ಬೆಳೆಗಾರರಿಗೆ ರಾಜ್ಯ ಸರ್ಕಾರ ಬೆಂಬಲವಾಗಿ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com