ಎಸ್‌ಸಿಗಳಿಗೆ ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ

ಶಿಕಾರಿಪುರದಲ್ಲಿ ಸೋಮವಾರ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.
ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ
ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಸೋಮವಾರ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.

ಪ್ರತಿಭಟನೆಯಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಲಮಾಣಿ ಅಥವಾ ಲಂಬಾಣಿ ಎಂದು ಕರೆಯಲ್ಪಡುವ ಬಂಜಾರ ಸಮುದಾಯದ ಕೆಲವರು ಗಾಯಗೊಂಡಿದ್ದಾರೆ.

ಬಹುತೇಕ ಯುವಕರು ಯಡಿಯೂರಪ್ಪ ಅವರ ಮನೆ ಬಳಿ ನುಗ್ಗಿ ಕಲ್ಲು ತೂರಾಟ ನಡೆಸಿ, ಕಿಟಕಿ ಗಾಜುಗಳಿಗೆ ಹಾನಿ ಮಾಡಿದ್ದು, ಪೊಲೀಸರು ಕ್ರಮ ಕೈಗೊಂಡರು. ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವುದನ್ನು ಗಮನಿಸಿ ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕರೆಸಲಾಯಿತು.

ಬಂಜಾರ ಸಮುದಾಯಕ್ಕೆ ಸೇರಿದ ಪರಿಶಿಷ್ಟ ಜಾತಿಗಳಿಗೆ 'ಕಡಿಮೆ' ಮೀಸಲಾತಿ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರಹಾಕಿದರು.

ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿಗೆ ಸಂಬಂಧಿಸಿದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕಳೆದ ವಾರ ನಿರ್ಧರಿಸಿದೆ. 

ಪರಿಶಿಷ್ಟ ಜಾತಿಗೆ ಶೇ 15 ರಿಂದ ಶೇ 17 ಕ್ಕೆ ಮೀಸಲಾತಿ ಹೆಚ್ಚಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಸಿ ಎಡ ಪ್ರವರ್ಗಕ್ಕೆ ಶೇ 6, ಎಸ್‌ಸಿ ಬಲ ಪಂಗಡಕ್ಕೆ ಶೇ.5.5, ಅಸ್ಪೃಶ್ಯರಿಗೆ ಶೇ 4.5 ಮತ್ತು ಇತರರಿಗೆ ಶೇ. 1ರಷ್ಟು ಮೀಸಲಾತಿ ಘೋಷಿಸಿದ್ದಾರೆ. ಈ ಪ್ರಸ್ತಾವನೆಯನ್ನು ಸಂವಿಧಾನದ ಒಂಬತ್ತನೇ ಶೆಡ್ಯೂಲ್‌ಗೆ ಸೇರಿಸುವಂತೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com