ಉತ್ತರ ಕನ್ನಡ: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ

2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಾರವಾರ: 2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ವರ್ಷ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಹಗರಣದ ಭಾಗವಾಗಿ ವಿಚಾರಣೆ ಎದುರಿಸಿದ್ದ ಭಟ್ ಅವರು ಸಿದ್ದಾಪುರ ತಾಲೂಕಿನ ಹೇರೂರು ಗ್ರಾಮದ ತಮ್ಮ ನಿವಾಸದ ಪಂಪ್‌ಹೌಸ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಪೊಲೀಸ್ ಅಧಿಕಾರಿಗಳ ಪ್ರಕಾರ, ಭಟ್ ತೀವ್ರವಾಗಿ ಸಾಲ ಮಾಡಿಕೊಂಡಿದ್ದರು ಮತ್ತು ಅನೇಕರು ಮರುಪಾವತಿ ಕೋರಿ ಅವರ ಮನೆಗೆ ಬಂದಿದ್ದರು. ಇದರಿಂದ ಅವಮಾನವಾಗಿದೆ ಎಂದು ನೊಂದಿದ್ದರು. ಇದನ್ನೆಲ್ಲ ಸಹಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. 

ನೆಲಮಾವಿ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಭಟ್ ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಪೊಲೀಸ್ ಮತ್ತು ಅಧಿಕಾರಿ ವರ್ಗದ ಉನ್ನತ ಅಧಿಕಾರಿಗಳ ನಡುವೆ ಸ್ನೇಹಿತರನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳ ನೇಮಕಾತಿ ಮತ್ತು ವರ್ಗಾವಣೆಯಲ್ಲಿ ಮಧ್ಯವರ್ತಿಯಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬಂದಿತ್ತು. ಅದಕ್ಕಾಗಿಯೇ ಅವರನ್ನು ಎರಡು ತಿಂಗಳ ಹಿಂದೆ ವಿಚಾರಣೆಗೆ ಕರೆದೊಯ್ಯಲಾಗಿತ್ತು ಎಂದು ಗ್ರಾಮದ ನಿವಾಸಿಯೊಬ್ಬರು ಹೇಳಿದರು. ಭಟ್ ಅವರು ಈ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಆರ್‌ವಿ ದೇಶಪಾಂಡೆ ಅವರ ಅನುಯಾಯಿಯಾಗಿದ್ದ ಸ್ಥಳೀಯ ನಾಯಕ ಷಣ್ಮುಗಗೌಡ ಅವರೊಂದಿಗೆ ಸಂಬಂಧ ಹೊಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com