ಬಿಜೆಪಿ ವಿರುದ್ಧ ಕಿಡಿಕಾರಲು ಏಪ್ರಿಲ್ 5ರಂದು ರಾಹುಲ್ ಗಾಂಧಿ ರಾಜ್ಯ ಭೇಟಿ, ಅದೇ ಸ್ಥಳದಿಂದ ಮತ್ತೆ ಭಾಷಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಕ್ಕೆ ಕರ್ನಾಟಕದಲ್ಲಿ ಭಾಷಣ ಮಾಡಿದ ಸ್ಥಳದಿಂದಲೇ ಪ್ರತೀಕಾರ ತೀರಿಸಿಕೊಳ್ಳಲು ಕಾಂಗ್ರೆಸ್ ಏಪ್ರಿಲ್ 5 ರಂದು ಬೃಹತ್ ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
Published: 28th March 2023 11:59 AM | Last Updated: 28th March 2023 07:29 PM | A+A A-

ರಾಹುಲ್ ಗಾಂಧಿ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಕ್ಕೆ ಕರ್ನಾಟಕದಲ್ಲಿ ಭಾಷಣ ಮಾಡಿದ ಸ್ಥಳದಿಂದಲೇ ಪ್ರತೀಕಾರ ತೀರಿಸಿಕೊಳ್ಳಲು ಕಾಂಗ್ರೆಸ್ ಏಪ್ರಿಲ್ 5 ರಂದು ಬೃಹತ್ ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಮತ್ತೆ ಅಲ್ಲಿಂದ ರಾಹುಲ್ ಗಾಂಧಿ ಭಾಷಣ ಮಾಡಲು ಪಕ್ಷವು ಯೋಜಿಸುತ್ತಿದೆ ಎನ್ನಲಾಗಿದೆ.
ಕೋಲಾರ ನಗರದಲ್ಲಿ ಮೋದಿ ಉಪನಾಮದ ಕುರಿತು ಮಾಡಿದ ಭಾಷಣಕ್ಕಾಗಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಹೀಗಾಗಿ, ಅದೇ ಸ್ಥಳದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಮತ್ತು ಅದನ್ನು ತನ್ನ ಅನುಕೂಲಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಬಯಸಿದೆ ಎಂದು ಮೂಲಗಳು ಖಚಿತಪಡಿಸಿವೆ.
ಅವರು 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರ ಅನರ್ಹತೆಗೆ ಕಾರಣವಾದ ಭಾಷಣವನ್ನು ಮಾಡಿದರು. ಕಾಂಗ್ರೆಸ್ ಅಭ್ಯರ್ಥಿಯಾದ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಪರ ಮತ ಯಾಚಿಸಿದ್ದರು.
ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ: ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸಬಲ್ಲದೇ ಕಾಂಗ್ರೆಸ್?
ತಮ್ಮ ಭಾಷಣದ ವೇಳೆ ರಾಹುಲ್ ಗಾಂಧಿ, 'ನೀರವ್ ಮೋದಿ, ಲಲಿತ್ ಮೋದಿ ಮತ್ತು ನರೇಂದ್ರ ಮೋದಿ, ಎಲ್ಲರಿಗೂ ಒಂದೇ ಉಪನಾಮವಿದೆ ಮತ್ತು ಎಲ್ಲರೂ ಕಳ್ಳರು. ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ' ಎಂದಿದ್ದರು.
ಕೋಲಾರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಳಬಾಗಲಿನ ರೋಡ್‌ಶೋ ಮತ್ತು ಕೆಜಿಎಫ್‌ನ ಕಾರ್ಪೊರೇಷನ್ ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯಲ್ಲೂ ಅವರು ಪುನರುಚ್ಚರಿಸಿದರು.