
ಅಪಘಾತದ ದೃಶ್ಯ
ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರೀಕರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ ಮತ್ತು ಅಜೀಮ್ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಟೆಕಿ ಅತ್ಯಾಚಾರ-ಕೊಲೆ ಪ್ರಕರಣ: ಅಪರಾಧಿ ಶಿವಕುಮಾರ್ ಗೆ ಜೀವಾವಧಿ ಶಿಕ್ಷೆ
ಅಪಘಾತದ ಸ್ಥಳಕ್ಕೆ ತರೀಕರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.