ಬೆಳಗಾವಿಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 70 ಲಕ್ಷ ರೂ. ದಾಖಲೆರಹಿತ ಹಣ ವಶ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯದ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
Published: 30th March 2023 10:59 AM | Last Updated: 30th March 2023 02:18 PM | A+A A-

ಬೆಳಗಾವಿಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಂಡ ಹಣ
ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯದ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ರಾಜಕೀಯ ನಾಯಕರ ನಡೆ-ನುಡಿಗಳು ಮುಖ್ಯವಾಗುತ್ತದೆ. ರಾಜ್ಯದ ಹಲವು ಚೆಕ್ ಪೋಸ್ಟ್ ಗಳಲ್ಲಿ ಅಕ್ರಮವಾಗಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ಮತ್ತು ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 70 ಲಕ್ಷ ದಾಖಲೆರಹಿತ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಕಾರಿನಲ್ಲಿ ಹಣ ತರಲಾಗುತ್ತಿತ್ತು. ಹಣಕ್ಕೆ ಸಂಬಂಧಿಸಿದಂತೆ ಕಾರಿನ ಚಾಲಕರ ಬಳಿ ಯಾವುದೇ ದಾಖಲೆಗಳಿರಲಿಲ್ಲ. ಕಾಗವಾಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದೆಡೆ, ರಾಯಭಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷ 30 ಸಾವಿರ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.