ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರಿಗೆ ಹಣ ಎಸೆದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಜಾಧ್ವನಿ ಯಾತ್ರೆ ವೇಳೆ ಹಣವನ್ನು ಹಂಚಿದ್ದಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಜಾಧ್ವನಿ ಯಾತ್ರೆ ವೇಳೆ ಹಣವನ್ನು ಹಂಚಿದ್ದಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವ ಮುನ್ನ ಮಂಗಳವಾರ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕಲಾವಿದರಿಗೆ ಹಣ ಎಸೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

'ಈ ಸಂಬಂಧ ನಾವು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ. ನಾನ್-ಕಾಗ್ನಿಸೆಬಲ್ ಅಪರಾಧವನ್ನು ದಾಖಲಿಸಿದ್ದೇವೆ ಮತ್ತು ನಿರ್ದೇಶನವನ್ನು ಕೋರಿ ನ್ಯಾಯಾಲಯದ ಮುಂದೆ ಈ ವಿಷಯವನ್ನು ಪ್ರಸ್ತುತಪಡಿಸಲಾಗುವುದು' ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇದೇ ವೇಳೆ ಮಂಡ್ಯದ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಪ್ರಚಾರದ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟ ಕಲಾವಿದರಿಗೆ ಮಾತ್ರ ಶಿವಕುಮಾರ್ ಹಣ ನೀಡಿದ್ದಾರೆ ಎಂದಿದ್ದಾರೆ.

ಮೇ 10ರ ಚುನಾವಣೆಗೂ ಮುನ್ನ ಮತದಾರರಿಗೆ ಆಮಿಷವೊಡ್ಡಿ ಹಣ ಹಂಚಿದ್ದಾರೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com