ಬಾಯ್‌ಫ್ರೆಂಡ್‌ನಂತೆ ಟ್ರೀಟ್ ಮಾಡಲು ಹೇಳಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ; ಶಾಲಾ ಮುಖ್ಯ ಶಿಕ್ಷಕನ ಬಂಧನ
ರಾಯಚೂರು ಜಿಲ್ಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Published: 30th March 2023 01:40 PM | Last Updated: 30th March 2023 01:40 PM | A+A A-

ಸಾಂದರ್ಭಿಕ ಚಿತ್ರ
ರಾಯಚೂರು: ಜಿಲ್ಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನಿವೃತ್ತಿಯ ಅಂಚಿನಲ್ಲಿರುವ ಆರೋಪಿ ಪ್ರಾಂಶುಪಾಲರು ಸಂತ್ರಸ್ತೆಯ ಫೋನ್ ನಂಬರ್ ಪಡೆದು ಆಕೆಯೊಂದಿಗೆ ಚಾಟಿಂಗ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಆಕೆಯ ಮೊಬೈಲ್‌ಗೆ ಅಶ್ಲೀಲ ಸಂದೇಶಗಳು ಮತ್ತು ಅಸಭ್ಯ ಫಾರ್ವರ್ಡ್‌ಗಳನ್ನು ಕಳುಹಿಸಲು ಆರಂಭಿಸಿದ್ದಾರೆ. ಸಂತ್ರಸ್ತೆಗೆ ಕರೆ ಮಾಡಿ ಅಶಭ್ಯ ವಿಷಯಗಳನ್ನು ಚರ್ಚಿಸಲು ಪ್ರಾರಂಭಿಸಿದ್ದಾರೆ. ಆರೋಪಿಯು ತನ್ನನ್ನು ಸರ್ ಎಂದು ಸಂಬೋಧಿಸದೆ ಬಾಯ್‌ಫ್ರೆಂಡ್‌ನಂತೆ ಭಾವಿಸಬೇಕು ಎಂದು ಕೇಳಿದ್ದ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.
ಇದನ್ನೂ ಓದಿ: ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತು
ತನ್ನ ನಿವಾಸದಲ್ಲಿ ತನ್ನೊಂದಿಗೆ ಸಮಯ ಕಳೆಯುವಂತೆ ಒತ್ತಾಯಿಸಿ ಆಕೆಗೆ ಹಲವು ಸಂದೇಶಗಳನ್ನು ಕಳುಹಿಸಿದ್ದ. ಆರೋಪಿ ಬಾಲಕಿಯನ್ನು ‘ಡಾರ್ಲಿಂಗ್’ ಎಂದು ಸಂಬೋಧಿಸುತ್ತಿದ್ದ. ಆಕೆ ಸಹಕರಿಸದಿದ್ದರೆ ಹತ್ತನೇ ತರಗತಿ ಪರೀಕ್ಷೆಯಲ್ಲಿ ಆಕೆಗೆ ಹಾನಿ ಉಂಟುಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ನೀಡಿದ ಚಿತ್ರಹಿಂಸೆಯ ಬಗ್ಗೆ ಬಾಲಕಿ ತನ್ನ ಪೋಷಕರ ಬಳಿ ಹೇಳಿಕೊಂಡ ನಂತರ, ಅವರು ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆತನ ವಿರುದ್ಧ ಪೊಕ್ಸೊ, ಲೈಂಗಿಕ ಕಿರುಕುಳ, ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.