ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಖಚಿತ, ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಬಗ್ಗೆ ಚರ್ಚೆ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಬರುವುದು ಖಚಿತವಾಗಿದ್ದು, ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
ಬಿಎಸ್.ಯಡಿಯೂರಪ್ಪ
ಬಿಎಸ್.ಯಡಿಯೂರಪ್ಪ

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಬರುವುದು ಖಚಿತವಾಗಿದ್ದು, ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ. ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪ ಯಾತ್ರೆ ಮಾಡಿದ್ದೇವೆ. ವಿಜಯ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು ಚುನಾವಣೆ ಮುಗಿಯುವವರೆಗೂ ಅವರವರ ಜಿಲ್ಲೆಗಳಲ್ಲಿ ಇದ್ದು ಕೆಲಸ ಮಾಡಬೇಕಾಗುತ್ತದೆ. ಬೆಂಗಳೂರಿನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಎಲ್ಲಾ ಸಂಸದರ ಸಭೆ ಕರೆಯಲಾಗುತ್ತದೆ. ಸಿಎಂ ಮೀಸಲಾತಿ ಹೆಚ್ಚಳ ಮಾಡಿರುವುದು ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸವಾಗಿದೆ.

ನಾನು ಜನರಿಗಾಗಿ ಹಲವು ಕಾರ್ಯಕ್ರಮ ಮಾಡಿದ್ದೇವೆ. ಸದ್ಯದಲ್ಲೇ ಅಭ್ಯರ್ಥಿಗಳನ್ನು ಹೈಕಮಾಂಡ್ ತೀರ್ಮಾನ ಮಾಡಲಿದ್ದಾರೆ. ನಂತರ ನಾನು, ಎಲ್ಲಾ ಮುಖಂಡರು, ಸಂಸದರು ಪ್ರವಾಸ ಮಾಡುತ್ತೇವೆ. ಹಿಂದೆ ನಾನು 25 ಸಂಸದರು ಗೆಲ್ಲುತ್ತೇವೆ ಎಂದು ಹೇಳಿದ್ದು ಸುಳ್ಳಾಗಲಿಲ್ಲ. ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್​ ಶಾ ಅವರಿಗೆ ಜನಬೆಂಬಲ ಸಿಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ​ ಉದ್ಘಾಟನೆ ವೇಳೆ 2 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಬಿಜೆಪಿಯ ಜನಬೆಂಬಲ ನೋಡಿ ಕಾಂಗ್ರೆಸ್​ನವರು ದಿಗ್ಭ್ರಾಂತರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಿಕ್ಕಿದಷ್ಟೇ ಬೆಂಬಲ ಈಗಲೂ ಸಿಗಲಿದೆ. ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ. ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದು ಕೇವಲ ತಿರುಕನ ಕನಸಾಗಲಿದೆ. ಕಾಂಗ್ರೆಸ್ ಪಕ್ಷ 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ. ಮೋದಿ, ಅಮಿತ್ ಶಾ ಇನ್ನೂ 3-4 ಬಾರಿ ರಾಜ್ಯಕ್ಕೆ ಬರಲಿದ್ದಾರೆ.

ಸಿಎಂ ಬೊಮ್ಮಾಯಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿದ್ದಾರೆ. ರಾಜ್ಯದ ಜನರಿಗಾಗಿ ನಾನು ಹಲವು ಕಾರ್ಯಕ್ರಮ ಜಾರಿಗೆ ತಂದಿದ್ದೇನೆ. ಎರಡು-ಮೂರು ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಆರಂಭವಾಗುತ್ತೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ನಡೆಸುವೆ. ರಾಜ್ಯದಲ್ಲಿ 130 ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್​ ಇಲ್ಲಸಲ್ಲದ ಆರೋಪ ಮಾಡ್ತಿದೆ. ಕಾಂಗ್ರೆಸ್ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ತಿರುಕನ ಕನಸು ಕಂಡಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಸಿದ್ದರಾಮಯ್ಯ, ಡಿಕೆಶಿ ಮತ್ತೆ ವಿಪಕ್ಷ ಸ್ಥಾನದಲ್ಲೇ ಇರುತ್ತಾರೆ ಎಂದರು.

ಸ್ವರೂಪ್​ ಯಾರು ಅಂತಾ ಗೊತ್ತಿಲ್ಲವೆಂದು ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಮಾಜಿ ಸಚಿವ ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಹೆಚ್​.ಡಿ.ರೇವಣ್ಣ ತಮಾಷೆಗೂ ಹೇಳಿರಬಹುದು ಎಂದ ಬೆಂಗಳೂರಿನಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದರು.

ದೇವೇಗೌಡರ ಮಕ್ಕಳಲ್ಲಿ ಜಗಳ, ಭಿನ್ನಾಭಿಪ್ರಾಯ ಗೋಚರ ಆಗಲ್ಲ. ಅವರಲ್ಲಿ ಜಗಳವಾಗುತ್ತಿದೆ ಅಂತಾ ನೀವು ನಂಬಿದ್ರೆ ಸುಳ್ಳಾಗ್ತೀರಾ. 4-5 ದಿನಗಳಲ್ಲಿ JDS​ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗುತ್ತೆ. ಹಾಸನ ಕ್ಷೇತ್ರದ ಟಿಕೆಟ್ ಕೂಡ ಘೋಷಣೆ ಆಗುತ್ತೆ. ಹಾಸನ ಟಿಕೆಟ್ ವಿಚಾರದಲ್ಲಿ ನಮಗೆ ಯಾವುದೇ ಗೊಂದಲ ಇಲ್ಲ ಎಂದರು.

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿ ಆ ಬಗ್ಗೆ ಚರ್ಚೆ ನಡೆಯುತ್ತಿದೆ.  ಸಿದ್ದರಾಮಯ್ಯ ಗೆಲುವು ಸುಲಭವಿದೆ ಎಂದು ನನಗೆ ಅನಿಸುತ್ತಿಲ್ಲ. ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿ ಹಾಕುತ್ತೇವೆ. ಟಿಕೆಟ್ ಬಗ್ಗೆ ತೀರ್ಮಾನ ಮಾಡೋದು ನಾನಲ್ಲ, ವರಿಷ್ಠರು. ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com