ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನು ಶೋಧಿಸಿದ ಚುನಾವಣಾಧಿಕಾರಿಗಳು!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರನ್ನು ತಡೆದ ಚುನಾವಣಾಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದರು. ಮೇ 10 ರಂದು ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.
Published: 31st March 2023 02:51 PM | Last Updated: 31st March 2023 03:23 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಪರಿಶೀಲಿಸಿದ ಚುನಾವಣಾಧಿಕಾರಿಗಳು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರನ್ನು ತಡೆದ ಚುನಾವಣಾಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದರು.
ಮೇ 10 ರಂದು ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.
ಅಧಿಕಾರಿಗಳು ವಾಹನ ತಪಾಸಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
#WATCH | Karnataka CM Basavaraj Bommai's car checked by the Flying Squad team of the Election Commission as he was on his way to Sri Ghati Subramanya Temple in Doddaballapur
— ANI (@ANI) March 31, 2023
Model Code of Conduct is enforced in the State in view of the May 10 Assembly elections. pic.twitter.com/esBkFcIMAL
ಮೂಲಗಳ ಪ್ರಕಾರ, ಬುಧವಾರ ಚುನಾವಣಾ ವೇಳಾಪಟ್ಟಿ ಪ್ರಕಟವಾದ ದಿನದಂದು ತಮ್ಮ ಅಧಿಕೃತ ಕಾರನ್ನು ಸರ್ಕಾರಕ್ಕೆ ಒಪ್ಪಿಸಿದ ಬೊಮ್ಮಾಯಿ ಅವರು ಖಾಸಗಿ ಕಾರಿನಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸಹುಡ್ಯ ಚೆಕ್‌ಪೋಸ್ಟ್‌ನಲ್ಲಿ ಅದನ್ನು ನಿಲ್ಲಿಸಲಾಯಿತು.
ಇದನ್ನೂ ಓದಿ: ಮಾದರಿ ಸಂಹಿತೆ ಉಲ್ಲಂಘನೆ: ಪರಸ್ಪರರ ವಿರುದ್ಧ ಕಾಂಗ್ರೆಸ್, ಬಿಜೆಪಿ ದೂರು ದಾಖಲು
'ಆಕ್ಷೇಪಾರ್ಹವಾದ ಏನೂ ಕಂಡುಬಂದಿಲ್ಲದ ಕಾರಣ ಅಧಿಕಾರಿಗಳು ವಾಹನವು ತೆರಳಲು ಅನುಮತಿ ನೀಡಿದರು ಮತ್ತು ಮುಖ್ಯಮಂತ್ರಿ ತಮ್ಮ ಪ್ರಯಾಣವನ್ನು ಮುಂದುವರೆಸಿದರು' ಎಂದು ಮೂಲಗಳು ತಿಳಿಸಿವೆ.