ಎಲ್ಲರನ್ನೂ ಮತದಾನ ಮಾಡುವಂತೆ ಪ್ರೇರೇಪಿಸಿ: ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಬಿಬಿಎಂಪಿ ಸೂಚನೆ

ಬೆಂಗಳೂರಿನಲ್ಲಿ ಮತದಾನದ ದಿನದಂದು ಹಿಂದಿನ ಚುನಾವಣೆಗಳಿಗಿಂತ ಹೆಚ್ಚಿನ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (ಆರ್‌ಡಬ್ಲ್ಯೂಎ) ಮತ್ತು ಟೆಕ್ಕಿಗಳನ್ನು ಸಂಪರ್ಕಿಸುತ್ತಿದ್ದಾರೆ.
ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಗೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತದಾನದ ದಿನದಂದು ಹಿಂದಿನ ಚುನಾವಣೆಗಳಿಗಿಂತ ಹೆಚ್ಚಿನ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (ಆರ್‌ಡಬ್ಲ್ಯೂಎ) ಮತ್ತು ಟೆಕ್ಕಿಗಳನ್ನು ಸಂಪರ್ಕಿಸುತ್ತಿದ್ದಾರೆ.

ಹೊರ ವರ್ತುಲ ರಸ್ತೆ, ಪೀಣ್ಯ ಕೈಗಾರಿಕಾ ಪ್ರದೇಶ, ಜವಳಿ ಪಾರ್ಕ್‌ಗಳು ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಸೇರಿದಂತೆ ಐಟಿ ಹಬ್‌ಗಳ ಜನರು ಸೇರಿದಂತೆ ಎಂಟು ವಲಯಗಳ ಅಪಾರ್ಟ್‌ಮೆಂಟ್ ಸಂಕೀರ್ಣಗಳು ಮತ್ತು ವಾಣಿಜ್ಯ ಕೇಂದ್ರಗಳನ್ನು ಸಂಪರ್ಕಿಸಿರುವ ಬಿಬಿಎಂಪಿ ಅಧಿಕಾರಿಗಳು, ಮತದಾನ ನಡೆಯುವ ದಿನವನ್ನು ರಜಾ ದಿನವೆಂದು ಪರಿಗಣಿಸದೆ, ಹೊರಬಂದು ಮತಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ.

ಎಲ್ಲಾ ಎಂಟು ವಲಯಗಳಿಗೆ ಭೇಟಿ ನೀಡಲಾಗುತ್ತಿದ್ದು, ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. RWA ಗಳು ಮತ್ತು ವೃತ್ತಿಪರರೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ. ವೃತ್ತಿಪರರ ಬೆಂಬಲದೊಂದಿಗೆ ನಾವು ಮತದಾರರ ಜಾಗೃತಿ ವೇದಿಕೆಗಳನ್ನು ರಚಿಸುತ್ತೇವೆ. ಜನರು ಹೊರ ಬಂದು ಮತಹಕ್ಕು ಚಲಾಯಿಸುವಂತೆ ಪ್ರೋತ್ಸಾಹಿಸುತ್ತೇವೆಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

2018 ರ ಚುನಾವಣೆಯಲ್ಲಿ ರಾಜ್ಯದಲ್ಲಿ 72.44 ಶೇಕಡಾ ಮತದಾನವಾಗಿತ್ತು. ಈ ಪೈಕಿ ಬೆಂಗಳೂರಿನಲ್ಲಿ ಶೇಕಡಾ 55ರಷ್ಟು ಮತದಾನವಾಗಿತ್ತು. 2013ರಲ್ಲಿ ನಗರದಲ್ಲಿ ಶೇ.52.83ರಷ್ಟು ಮತದಾನವಾಗಿತ್ತು. ಆ ವರ್ಷದಲ್ಲಿ ರಾಜ್ಯದಲ್ಲಿ ಶೇಕಡಾ 71.83 ರಷ್ಟು ಮತದಾನವಾಗಿತ್ತು.

ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಉದ್ದೇಶಪೂರ್ವಕವಾಗಿಯೇ ಜನರು ಮತಹಕ್ಕು ಚಲಾಯಿಸುತ್ತಿಲ್ಲ ಎಂಬುದು ಖಚಿತವಾಗಿಲ್ಲ. ಆದರೆ, ಬುಧವಾರ ಮತದಾನ ನಡೆಸುತ್ತಿರುವುದು ಉತ್ತಮ ಕ್ರಮವಾಗಿದೆ. ಏಕೆಂದರೆ, ವಾರಾಂತ್ಯ ದಿನ, ಬೇಸಿಗೆ ರಜೆಯಂತೆ ಈ ದಿನವನ್ನು ಪರಿಗಣಿಸಲು ಸಾಧ್ಯವಾಗುವುದಿಲ್ಲ. ಜನರು ಮತಹಕ್ಕು ಚಲಾಯಿಸುವಂತೆ ಮಾಡಬೇಕೆಂದು ಕಂಪನಿಗಳು, ಅಪಾರ್ಟ್ಮೆಂಟ್ ನಿವಾಸಿಗಳು ಮತ್ತು ಉದ್ಯಮ ಸಂಸ್ಥೆಗಳ ಮೇಲೆ ನಾವು ಒತ್ತಡ ಹೇರುತ್ತಿದ್ದೇವೆಂದು ಹೇಳಿದ್ದಾರೆ.

ಜನಜಾಗೃತಿ ವೇದಿಕೆಗಳು ದಾಖಲಾತಿಗೆ ಉತ್ತೇಜನ ನೀಡುತ್ತವೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ದಾಖಲಾತಿ ಮಾಡಿಕೊಳ್ಳಲು ಜನರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿದೆ ಎಂದು ಗಿರಿನಾಥ್ ತಿಳಿಸಿದ್ದಾರೆ.

ನಮ್ಮ ಗಮನ ಈಗ ಮತದಾರರನ್ನು ಬೂತ್‌ಗಳಿಗೆ ಸೆಳೆಯುವುದರ ಮೇಲೆ ಕೇಂದ್ರೀಕೃತವಾಗಿದೆ. ದಾಖಲಾತಿಗೆ ಬರುತ್ತಿರುವವರನ್ನುಅನುಮಾನದಿಂದ ನೋಡಲಾಗುತ್ತಿದೆ. ಆದರೆ, ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com