ಭಾರಿ ಮಳೆ: ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ತಾಯಿ, ಇಬ್ಬರು ಮಕ್ಕಳು

ಭಾನುವಾರ ಇಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೀದರ್: ಭಾನುವಾರ ಇಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಅವಘಡ ಸಂಭವಿಸಿದಾಗ ಮೂವರು ಜಮೀನಿನಿಂದ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಹೊಳೆ ದಾಟುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯನ್ನು ಸುನಂದಾ (45), ಮಗ ಸುಮಿತ್ (10) ಮತ್ತು ಮಗಳು ಐಶ್ವರ್ಯ (16) ಎಂದು ಗುರುತಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯ ಆರಂಭಿಸಿದ್ದಾರೆ.
ಈ ಸಂಬಂಧ ಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com