ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ.
Published: 02nd May 2023 01:56 PM | Last Updated: 02nd May 2023 02:21 PM | A+A A-

ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಮುಳಬಾಗಿಲಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಶಿವಕುಮಾರ್ ಬೆಂಗಳೂರಿನಿಂದ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಮಾರ್ಗ ಮಧ್ಯೆ ಹದ್ದು ಬಂದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ. ಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ನ ಗಾಜು ಪುಡಿಪುಡಿಯಾಗಿದೆ. ಇದರಿಂದಾಗಿ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ.
ಜಕ್ಕೂರು ಹೆಲಿಪ್ಯಾಡ್‌ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪೈಲೆಟ್ ಹರಸಾಹಸದಿಂದ ಭಾರಿ ಅನುಹುತ ತಪ್ಪಿದ್ದು ಕೂದಲೆಳೆ ಅಂತರದಲ್ಲಿ ಶಿವಕುಮಾರ್ ಅಪಾಯದಿಂದ ಪಾರಾಗಿದ್ದಾರೆ. ಹದ್ದು ಡಿಕ್ಕಿಯಾದ ರಭಸಕ್ಕೆ ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದೆ. ಡಿಕೆ ಶಿವಕುಮಾರ್ ಜೊತೆಗಿದ್ದ ಇತರ ಕೆಲವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಲಾರದ ಮುಳಭಾಗಿಲಿನಲ್ಲಿ ಸಾರ್ವಜನಿಕ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೀಗಾಗಿ ಡಿಕೆ ಶಿವಕುಮಾರ್ ರಸ್ತೆ ಮಾರ್ಗದ ಮೂಲಕ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದಾರೆ.
#KarnatakaAssemblyElection2023
— Devaraj Hirehalli Bhyraiah (@swaraj76) May 2, 2023
KPCC president @DKShivakumar chopper landed midway after hit by an eagle on air. The windowpane found broken. He bound to #Mulabagilu to campaign for party's candidate Adinarayana.@XpressBengaluru @AshwiniMS_TNIE pic.twitter.com/fISXZuYdqx