ಅರಣ್ಯ ಇಲಾಖೆ ಒಪ್ಪಿಗೆ ಇಲ್ಲದೆ ವಿಂಡ್‌ಮಿಲ್‌ಗೆ ಅನುಮತಿ ನೀಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮುಂಬೈ ಮೂಲದ ವಿಂಡ್ ವರ್ಲ್ಡ್(ಇಂಡಿಯಾ) ಲಿಮಿಟೆಡ್‌ನ ಗುತ್ತಿಗೆ ಅವಧಿ ಮುಗಿದ ನಂತರ ಅರಣ್ಯ ಇಲಾಖೆ ಅನುಮತಿ ಪಡೆಯದೆ 221.80 ಹೆಕ್ಟೇರ್‌ನಲ್ಲಿ ವಿಂಡ್‌ಮಿಲ್ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದ ಅಹಮದಾಬಾದ್ ವಿಭಾಗದ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮುಂಬೈ ಮೂಲದ ವಿಂಡ್ ವರ್ಲ್ಡ್(ಇಂಡಿಯಾ) ಲಿಮಿಟೆಡ್‌ನ ಗುತ್ತಿಗೆ ಅವಧಿ ಮುಗಿದ ನಂತರ ಅರಣ್ಯ ಇಲಾಖೆ ಅನುಮತಿ ಪಡೆಯದೆ 221.80 ಹೆಕ್ಟೇರ್‌ನಲ್ಲಿ ವಿಂಡ್‌ಮಿಲ್ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದ ಅಹಮದಾಬಾದ್ ವಿಭಾಗದ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಅರಣ್ಯ ಇಲಾಖೆ ಅನುಮತಿಯಿಲ್ಲದೆ ವಿಂಡ್‌ಮಿಲ್‌ನ ನೇರ ಕಾರ್ಯಾಚರಣೆ/ಮುಂದುವರಿಕೆಗೆ ಅನುಮತಿ ನೀಡುವ ಯಾವುದೇ ಅಧಿಕಾರ ನ್ಯಾಯಮಂಡಳಿಗೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ವೈಲ್ಡ್ ವರ್ಲ್ಡ್ ಸಲ್ಲಿಸಿದ ಅರ್ಜಿಯ ಮೇಲೆ ಜುಲೈ 6, 2022ರ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಈ ಆದೇಶವನ್ನು ನೀಡಿದ್ದಾರೆ.

ಕಾರ್ಪೊರೇಟ್ ಕಂಪನಿ ವೈಲ್ಡ್ ವರ್ಲ್ಡ್‌ನ ವಿಂಡ್‌ಮಿಲ್‌ ಕಾರ್ಯನಿರ್ವಹಣೆಗೆ ಅನುಮತಿ ನೀಡುವಂತೆ ಟ್ರಿಬ್ಯೂನಲ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದನ್ನು ಅನುಸರಿಸಿ, ರಾಜ್ಯ ಸರ್ಕಾರ ನ್ಯಾಯಾಧಿಕರಣದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com