ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ.

ಪುತ್ತೂರು ನಗರ ಪೊಲೀಸರ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಪುತ್ತೂರು ಬಸ್ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಫಾರಿಸ್ ಮತ್ತು ಆತನ ಕಾಲೇಜು ಸಹಪಾಠಿಗಳು ಜ್ಯೂಸ್ ಕುಡಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳೀಯ ಆಟೋ ಚಾಲಕ ಮತ್ತು ಅವನ ಸ್ನೇಹಿತರು ಅನ್ಯ ಧರ್ಮದ ಹುಡುಗಿಯರೊಂದಿಗೆ ಮಾತನಾಡಿದ್ದಕ್ಕಾಗಿ ಫಾರಿಸ್ ಅವರನ್ನು ಥಳಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಾತೆ ತಿಳಿಸಿದ್ದಾರೆ. ಆರೋಪಿಗಳು ಯಾವುದಾದರೂ ಹಿಂದುತ್ವ ಸಂಘಟನೆಗೆ ಸೇರಿದವರಾ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com