ಕಾಂಗ್ರೆಸ್ ಅಭ್ಯರ್ಥಿ ಸಂಬಂಧಿಕನ ಮನೆ ಮೇಲೆ ಐಟಿ ದಾಳಿ: ಗಿಡದಲ್ಲಿ 1 ಕೋಟಿ ರೂ. ಪತ್ತೆ!

ಪುತ್ತೂರಿನ ಕಾಂಗ್ರೆಸ್‌ ಶಾಸಕ ಅಶೋಕ್‌ ರೈ ಅವರ ಸಂಬಂಧಿಕರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಮನೆಯ ಆವರಣದಲ್ಲಿರುವ ಅಲಂಕಾರಿಕ ಗಿಡದಲ್ಲಿ ನೇತು ಹಾಕಿದ್ದ ಬಾಕ್ಸ್'ನಲ್ಲಿ ರೂ.1 ಕೋಟಿ ಪತ್ತೆಯಾಗಿರುವುದನ್ನು ಕಂಡು ಶಾಕ್ ಆಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಪುತ್ತೂರಿನ ಕಾಂಗ್ರೆಸ್‌ ಶಾಸಕ ಅಶೋಕ್‌ ರೈ ಅವರ ಸಂಬಂಧಿಕರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಮನೆಯ ಆವರಣದಲ್ಲಿರುವ ಅಲಂಕಾರಿಕ ಗಿಡದಲ್ಲಿ ನೇತು ಹಾಕಿದ್ದ ಬಾಕ್ಸ್'ನಲ್ಲಿ ರೂ.1 ಕೋಟಿ ಪತ್ತೆಯಾಗಿರುವುದನ್ನು ಕಂಡು ಶಾಕ್ ಆಗಿದ್ದಾರೆ.

ಅಶೋಕ್ ಕುಮಾರ್ ರೈ ಅವರ ಬೆಂಗಳೂರಿನ ನಿವಾಸ ಹಾಗೂ ಅವರ ಸಹೋದರ ಸುಬ್ರಹ್ಮಣ್ಯ ರೈ ಅವರ ಮೈಸೂರಿನ ನಿವಾಸದ ಮೇಲೆ ನಿನ್ನೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು.

ಸುಬ್ರಹ್ಮಣ್ಯ ರೈ ಅವರ ಮೈಸೂರಿನ ಮನೆಯ ಮುಂದೆ ಅಲಂಕಾರಿಕ ಗಿಡವಿದ್ದು, ಈ ಗಿಡದಲ್ಲಿ ಮಾವಿನ ಹಣ್ಣುಗಳನ್ನು ಪ್ಯಾಕ್ ಮಾಡುವ ರೀತಿಯ ಬಾಕ್ಸ್ ಗಳನ್ನು ನೇತು ಹಾಕಲಾಗಿದೆ. ಆರಂಭದಲ್ಲಿ ಅಧಿಕಾರಿಗಳು ಇದನ್ನು ನಿರ್ಲಕ್ಷಿಸಿದ್ದರು. ಆದರೆ, ನಂತರ ಅನುಮಾನದ ಮೇಲೆ ಬಾಕ್ಸ್ ಗಳನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಬಾಕ್ಸ್ ನಲ್ಲಿ ರೂ.1 ಕೋಟಿ ನಗದು ಪತ್ತೆಯಾಗಿರುವುದನ್ನು ಕಂಡು ಶಾಕ್ ಆಗಿದ್ದಾರೆ. ನಂತರ ಈ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಮಧ್ಯೆ ಬಾಕ್ಸ್ ನಲ್ಲಿ ದುಡ್ಡು ಸಿಕ್ಕಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದಾಳಿ ಕುರಿತು ಅಧಿಕಾರಿಗಳು ಯಾವುದೇ ರೀತಿಯ ಮಾಹಿತಿಗಳನ್ನು ನೀಡಿಲ್ಲ. ಆದರೆ, ಮಧ್ಯಾಹ್ನದವರೆಗೂ ನಡೆಸಲಾದ ದಾಳಿಯಲ್ಲಿ ಭಾರೀ ಪ್ರಮಾಣದ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಜೆಪಿ ನಗರ ಮತ್ತು ದೇವರಾಜ್ ಅರಸ್ ರಸ್ತೆಯಲ್ಲಿ ಶಾಖೆಗಳನ್ನು ಹೊಂದಿರುವ ಪ್ರಸಿದ್ಧ ಸ್ವೀಟ್ ಸ್ಟಾಲ್‌'ವೊಂದರ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com