ಕರ್ನಾಟಕ ಚುನಾವಣೆ: ರಾಯಚೂರಿನಲ್ಲಿ ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಅಸುನೀಗಿದ 82 ವರ್ಷದ ವೃದ್ಧೆ!

ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. 
ಮಂಗಮ್ಮ
ಮಂಗಮ್ಮ

ರಾಯಚೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. 

ಮೃತ ವೃದ್ಧೆ ಅಲಬನೂರು ಗ್ರಾಮದ 82 ವರ್ಷದ ಮಂಗಮ್ಮ ಎಂದು ತಿಳಿದುಬಂದಿದೆ. ಮಂಗಮ್ಮ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. 

ಈ ಬಾರಿ ಚುನಾವಣಾ ಆಯೋಗ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಟ್ಟಿತ್ತು. ಅದರಂತೆ ನಿನ್ನೆ ಮಂಗಮ್ಮ ಅವರ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿದ್ದರು. ಮಂಗಮ್ಮ ಅವರ ಮನೆಗೆ ಪಿಆರ್​ಒ ದಿನೇಶ ಕೆಪಿ ಹಾಗೂ ಎಪಿಆರ್​​ಒ ಬಸಪ್ಪ ಹೆಚ್ ಹಾಗೂ ಇತರ ಸಿಬ್ಬಂದಿ ತೆರಳಿದ್ದರು.

349 ಸಂಖ್ಯೆಯ ಮತಪತ್ರವನ್ನು ಮಂಗಮ್ಮ ಅವರಿಗೆ ನೀಡಲಾಗಿತ್ತು. ಮಧ್ಯಾಹ್ನ ಸುಮಾರು 12.19ರ ವೇಳೆಗೆ ಮಂಗಮ್ಮ ಮತದಾನ ಮಾಡಿದ್ದು ನಂತರ ಮಧ್ಯಾಹ್ನ 12.50ಕ್ಕೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com