
ಸಾಂದರ್ಭಿಕ ಚಿತ್ರ
ಯಾದಗಿರಿ: KSRTC ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ದುರ್ಮರಣ ಹೊಂದಿದ್ದಾರೆ.
ಯಾದಗಿರಿಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಮೃತರನ್ನು ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ 59 ವರ್ಷದ ನಾಗರಾಜು ಸಜ್ಜನ್, 50 ವರ್ಷದ ಮಹಾದೇವಿ ಹಾಗೂ 45 ವರ್ಷದ ರೇಣುಕಾ ಎಂದು ಗುರುತಿಸಲಾಗಿದೆ.
ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದು ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನ
ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಚಾಲಕ ಬಸ್ ಅನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.