ಮೋದಿ ರೋಡ್ ಶೋ ಸೇರಿ ಎಲ್ಲ ಪಕ್ಷಗಳ ಚುನಾವಣಾ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: PIL ವಜಾ

ಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ಸೇರಿದಂತೆ ಎಲ್ಲ ಪಕ್ಷಗಳ ರೋಡ್ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್‌ ಶೋಗೆ ಅನುಮತಿ ನೀಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟ ಹೈಕೋರ್ಟ್‌ ವಜಾಗೊಳಿಸಿದೆ.
ಮೋದಿ ರೋಡ್‌ ಶೋ (ಸಂಗ್ರಹ ಚಿತ್ರ)
ಮೋದಿ ರೋಡ್‌ ಶೋ (ಸಂಗ್ರಹ ಚಿತ್ರ)

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್‌ ಶೋಗೆ ಅನುಮತಿ ನೀಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟ ಹೈಕೋರ್ಟ್‌ ವಜಾಗೊಳಿಸಿದೆ.

ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್‌ ಶೋಗೆ ಅನುಮತಿ ನೀಡಬಾರದು ಎಂದು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ.ವಿಜಯ್ ಕುಮಾರ್ ಅವರಿದ್ದ ಪೀಠ, ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಭಾನುವಾರ ಬೆಳಗ್ಗೆ ಒಂಬತ್ತು ಗಂಟೆಯಿಂದ 11.30ರ ವರೆಗೆ ರೋಡ್ ಶೋಗೆ ಅನುಮತಿ ನೀಡಿದೆ.

ಭಾರತದಲ್ಲಿ ಚುನಾವಣೆಗಳನ್ನು ಹಬ್ಬದ ಆಚರಣೆ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಶುಕ್ರವಾರ ಬೆಂಗಳೂರಿನಲ್ಲಿ ಮೇ 6 ಮತ್ತು 7 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸೇರಿದಂತೆ ರಾಜಕೀಯ ಪಕ್ಷಗಳ ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ನಿಲ್ಲಿಸಲು ನಿರಾಕರಿಸಿದೆ. "1952 ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಿಂದ ಸಂಸತ್ತಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ, ಈ ರೀತಿಯ ರ್ಯಾಲಿಗಳು ನಡೆದಿವೆ ಎಂದು ತೋರಿಸಲು ದಾಖಲೆಗಳಿವೆ ... ರಾಜಕೀಯ ರ್ಯಾಲಿಗಳು ಸಾರ್ವಜನಿಕರಿಗೆ ಚುನಾವಣಾ ಪ್ರಕ್ರಿಯೆಯ ಬಗ್ಗೆ ಜ್ಞಾನ ಮತ್ತು ಮಾಹಿತಿಯನ್ನು ಪ್ರಸಾರ ಮಾಡುವ ಕೆಲವು ಅಂಶಗಳನ್ನು ಹೊಂದಿವೆ. ಲಿಲ್ಲಿ ಥಾಮಸ್ vs ಯೂನಿಯನ್ ಆಫ್ ಇಂಡಿಯಾದ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಸಾರ್ವಜನಿಕರಿಗೆ ಜ್ಞಾನದ ಪ್ರಸಾರದ ಅವಶ್ಯಕತೆಯಿದೆ ಎಂದು ಗಮನಿಸಿತ್ತು. ಏಕೆಂದರೆ ಪ್ರಜಾಪ್ರಭುತ್ವಕ್ಕೆ ಮತದಾರರಿಂದ ಜ್ಞಾನದ ಆಯ್ಕೆಯ ಅಗತ್ಯವಿರುತ್ತದೆ ಮತ್ತು ಈ ಉದ್ದೇಶವು ಈ ರೀತಿಯ ರ್ಯಾಲಿಗಳಿಂದ ಕಾರ್ಯನಿರ್ವಹಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರು ಈ ರೀತಿಯ ವಿಷಯಗಳಲ್ಲಿ, ನ್ಯಾಯಾಲಯವು ಮಧ್ಯಪ್ರವೇಶಿಸಲು ನಿಧಾನವಾಗಿರಬೇಕು, ಏಕೆಂದರೆ ಇದು ವರ್ಷಗಳ ಅನುಭವದ ಕಾರ್ಯನಿರ್ವಾಹಕರ ಮಾನವೀಯ ಬುದ್ಧಿವಂತಿಕೆಗೆ ಸಂಬಂಧಿಸಿದೆ. ಮಾರ್ಚ್ 29 ರಂದು ಚುನಾವಣೆ ಘೋಷಣೆಯಾದಾಗಿನಿಂದ, ರಾಜ್ಯದಾದ್ಯಂತ ಎಲ್ಲಾ 2,517 ವಿವಿಧ ಗಾತ್ರದ ರ್ಯಾಲಿಗಳನ್ನು ನಡೆಸಲಾಗಿದೆ, ಅದರಲ್ಲಿ 371 ಬೆಂಗಳೂರಿನಲ್ಲಿ ನಡೆದಿದ್ದು, ಇದರಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಎಂದು ವಾದಿಸಿದರು.

ವಕೀಲ ಎನ್‌ ಪಿ ಅಮೃತೇಶ್‌ ಅವರು ಈ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಧ್ಯಾಹ್ನ 2:30 ವಿಚಾರಣೆ ಬಂದಿದೆ. ರಾಜ್ಯ ಬಿಜೆಪಿಯು ರೋಡ್‌ ಶೋ ನಡೆಸುವುದಕ್ಕೆ ನೀಡಿರುವ ಅನುಮತಿ, ಸಂಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲು ರಾಜ್ಯ ಸರ್ಕಾರ, ಪೊಲೀಸ್‌ ಮಹಾನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಬೆಂಗಳೂರಿನಲ್ಲಿ 36 ಕಿ ಮೀ ವ್ಯಾಪ್ತಿಯಲ್ಲಿ ಮೋದಿ ರೋಡ್‌ ಶೋ ನಡೆಸಲು ಉದ್ದೇಶಿಸಲಾಗಿದ್ದು, ಇದು ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ರೋಡ್‌ ಷೋ ಆರಂಭವಾಗಲಿದ್ದು, 45 ವಿಧಾನಸಭಾ ಕ್ಷೇತ್ರಗಳನ್ನು ಇದು ಒಳಗೊಳ್ಳಲಿದೆ. ಸಂಜೆ 4ಕ್ಕೆ ಮತ್ತೆ ರೋಡ್‌ ಶೋ ಆರಂಭವಾಗಲಿದ್ದು, 13 ವಿಧಾನಸಭಾ ಕ್ಷೇತ್ರಗಳಲ್ಲಿ ಇದು ನಡೆಯಲಿದೆ.

ಬೆಂಗಳೂರಿನ ಪ್ರಮುಖ 18 ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್‌ ಷೋ ಹಾದು ಹೋಗಲಿದ್ದು, ಇಲ್ಲಿ ಹಲವು ವಾಣಿಜ್ಯ ಮತ್ತು ಜನವಸತಿ ಪ್ರದೇಶಗಳು ಇವೆ. ರೋಡ್‌ ಶೋನಲ್ಲಿ 10 ಲಕ್ಷಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸಂಸದ ಪಿ ಸಿ ಮೋಹನ್‌ ಹೇಳಿದ್ದಾರೆ. ಇದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಜನರು ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಉಂಟಾಗುವ ನಷ್ಟವನ್ನು ರಾಜಕೀಯ ಪಕ್ಷಗಳು ತುಂಬಿಕೊಡುವುದಿಲ್ಲ ಎಂದು ವಿವರಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಕಚೇರಿಗೆ ಹೋಗುವವರಿಗೆ ಭಾರಿ ಸಮಸ್ಯೆಯಾಗಲಿದೆ. ಹೀಗಾಗಿ ರೋಡ್‌ ಶೋ ನಿರ್ಬಂಧಿಸುವಂತೆ ಕೋರಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com