ವಿಧಾನಸಭೆ ಚುನಾವಣೆ: ಮೇ 9 ಮತ್ತು 10ರಂದು ಕೆಎಸ್ ಆರ್ ಟಿಸಿ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯ

ಮೇ 10ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಲುವಾಗಿ ಹೆಚ್ಚಿನ ಬಸ್ಸುಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೇವೆಗೆ ನಿಯೋಜಿಲಾಗಿರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಬಸ್ಸುಗಳ ಸೇವೆಯಲ್ಲಿ ಮೇ 9 ಮತ್ತು 10ರಂದು ವ್ಯತ್ಯಯವಾಗಲಿದೆ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಎಸ್ ಆರ್ ಟಿಸಿ ಬಸ್ಸು
ಕೆಎಸ್ ಆರ್ ಟಿಸಿ ಬಸ್ಸು

ಬೆಂಗಳೂರು: ಮೇ 10ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಲುವಾಗಿ ಹೆಚ್ಚಿನ ಬಸ್ಸುಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೇವೆಗೆ ನಿಯೋಜಿಲಾಗಿರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಬಸ್ಸುಗಳ ಸೇವೆಯಲ್ಲಿ ಮೇ 9 ಮತ್ತು 10ರಂದು ವ್ಯತ್ಯಯವಾಗಲಿದೆ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೇ 9 ಮತ್ತು 10ರಂದು ಎಂದಿನಂತೆ ಕೆಎಸ್ ಆರ್ ಟಿಸಿ ಬಸ್ಸುಗಳ ಸೇವೆ ಸಾಕಷ್ಟು ಸಂಖ್ಯೆಯಲ್ಲಿ ರಾಜ್ಯಾದ್ಯಂತ ಇರುವುದಿಲ್ಲ. ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕೆಂದು ಕೋರಿಕೊಂಡಿದೆ.

ರಾಜ್ಯದಲ್ಲಿ ಒಟ್ಟು 8,100 ಕೆಎಸ್​ಆರ್​ಟಿಸಿ ಬಸ್​ಗಳಿದ್ದು, ಈ ಪೈಕಿ 3,700 ಬಸ್​​ಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿವೆ. ಮೇ 9 ಮತ್ತು 10 ರಂದು 4,400 ಬಸ್​ಗಳು ಮಾತ್ರ ಸಂಚಾರ ಮಾಡುತ್ತವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com