ಸಿದ್ದು-ಡಿಕೆಶಿ ಆತ್ಮೀಯ ಮಾತುಕತೆ: ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್!

ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಎಲ್ಲಾ ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಬಿಂಬಿಸುವ ವಿಡಿಯೋವೊಂದನ್ನು ಭಾನುವಾರ ಬಿಡುಗಡೆ ಮಾಡಿದೆ.
ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್.
ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್.

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಎಲ್ಲಾ ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಬಿಂಬಿಸುವ ವಿಡಿಯೋವೊಂದನ್ನು ಭಾನುವಾರ ಬಿಡುಗಡೆ ಮಾಡಿದೆ.

ಚುನಾವಣಾ ಪ್ರಚಾರದ ಭರಾಟೆಯ ನಡುವೆಯೇ ಇಬ್ಬರೂ ನಾಯಕರು ಕುಳಿತು ಲೋಕಾಭಿರಾಮವಾಗಿ, ಆತ್ಮೀಯವಾಗಿ ಮತ್ತು ವೈಯಕ್ತಿಕ ವಿಚಾರಗಳನ್ನೂ ಮಾತನಾಡಿರುವ ವಿಡಿಯೊವೊಂದನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

ಹೊಸ ಮಾದರಿಯ ಸಂದರ್ಶನ ಇದಾಗಿದ್ದು, ಇಬ್ಬರೂ ನಾಯಕರು ಪರಸ್ಪರ ಮಾತನಾಡಿರುವುದು, ಪ್ರಶ್ನೆಗಳನ್ನು ಕೇಳುತ್ತಾ ಮನಬಿಚ್ಚಿ ಮಾತನಾಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com