ರಾಜ್ಯ ವಿಧಾನಸಭಾ ಚುನಾವಣೆ; ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ, ಬಳಿಕ ಮನೆಮನೆಗೆ ತೆರಳಿ ಮತಯಾಚನೆ

ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮಾರ ಸಂಜೆ 6ಕ್ಕೆ ತೆರೆ ಬೀಳಲಿದ್ದು, ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮಾರ ಸಂಜೆ 6ಕ್ಕೆ ತೆರೆ ಬೀಳಲಿದ್ದು, ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

ಆ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಮಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವೂ ನಾಳೆ ಸಂಜ 6 ಗಂಟೆಯೊಳಗೆ ಮುಕ್ತಾಯಗೊಳ್ಳಬೇಕು.

ಬಹಿರಂಗ ಪ್ರಚಾರ ಮುಗಿದ ಬಳಿಕ ಸ್ಟಾರ್ ಪ್ರಚಾರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com