ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಶಿಕ್ಷಕನ ಬಂಧನ

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಮತದಾರರಿಗೆ ಟೋಕನ್ ಹಂಚುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಮತದಾರರಿಗೆ ಟೋಕನ್ ಹಂಚುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಅಫಜಲಪುರ ತಾಲೂಕಿನ ಹಾವನೂರಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಚಿದಾನಂದ ಮೇತ್ರೆ ಬಂಧನಕ್ಕೊಳಗಾಗಿದ್ದಾರೆ.

ಚಿದಾನಂದ ಅವರು, ಗುಲ್ಬರ್ಗ-ದಕ್ಷಿಣದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದು, ಮತದಾರರಿಗೆ ಟೋಕನ್ ವಿತರಿಸುತ್ತಿದ್ದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಬಿಜೆಪಿ ಪರ ಮತದಾನ ಮಾಡಿದ ಬಳಿಕ ಟೋಕನ್ ವಾಪಸ್ ನೀಡಿ ಹಣ ಪಡೆದುಕೊಳ್ಳುವಂತೆ ಚಿದಾನಂದ ಅವರು ಮತದಾರರಿಗೆ ತಿಳಿಸುತ್ತಿದ್ದು, ಇದನ್ನು ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರು ಆತನನ್ನು ಹಿಡಿದು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳ್ಕಾಗಮಿಸಿದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಭೀಮರಾಯ ಅವರು, ಟೋಕನ್ ಸಮೇತ ಚಿದಾನಂದ ಅವರನ್ನು ಬ್ರಹ್ಮಪುರ ಠಾಣೆ ಪೊಲೀಸರ ಬಳಿಕೆ ಕರೆದೊಯ್ದಿದ್ದು, ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಚಿದಾನಂದ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಬಂಧನಕ್ಕೊಶಪಡಿಸಿದ್ದಾರೆ. ನಂತರ ಚಿದಾನಂದ ಅವರು ಜಾಮೀನಿನ ಮೇಲೆ ಹೊರಬಂದಿದ್ದಾರೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com