ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(KSEAB) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.
Published: 08th May 2023 01:16 PM | Last Updated: 08th May 2023 08:39 PM | A+A A-

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಟಾಪರ್ಸ್
ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(KSEAB) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.
ಯಾರು ಆ ನಾಲ್ವರು ವಿದ್ಯಾರ್ಥಿಗಳು?: ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನ್ಯೂ ಮೆಕಾಲೆ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಪೈ, ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಿಜಿಎಸ್ ಶಾಲೆಯ ಯಶಸ್ ಗೌಡ, ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ಭೀಮನಗೌಡ ಪಾಟೀಲ್ ಈ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರ ಸಂಖ್ಯೆ 3,41,108 ಆಗಿದ್ದು, ಬಾಲಕಿಯರ ಸಂಖ್ಯೆ 3,59,511, SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಆಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.
ಇದನ್ನೂ ಓದಿ: ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಎಂದಿನಂತೆ ಬಾಲಕಿಯರೇ ಮೇಲುಗೈ, ಚಿತ್ರದುರ್ಗಕ್ಕೆ ಮೊದಲ ಸ್ಥಾನ
ಈ ಬಾರಿ ರಾಜ್ಯದಲ್ಲಿ ಶೇ 83.89 ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶ ಕುಸಿತ ಕಂಡಿದೆ. ಕಳೆದ ವರ್ಷ ಶೇ 85.13 ಫಲಿತಾಂಶ ಬಂದಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಹೆಣ್ಣು ಮಕ್ಕಳು ಶೇ. 87.87 ರಷ್ಟು ಉತ್ತೀರ್ಣರಾಗಿದ್ದಾರೆ. ಗಂಡು ಮಕ್ಕಳು ಶೇ. 80.08 ಉತ್ತೀರ್ಣರಾಗಿದ್ದಾರೆ.
ಮರುಮೌಲ್ಯಮಾಪನ: ಹೆಚ್ಚಿನ ಅಂಕ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 15ರಿಂದ ಮೇ 21ರವರೆಗೆ ಅವಕಾಶವಿದೆ. ಮರುಮೌಲ್ಯಮಾಪನ ಬಯಸುವ ವಿದ್ಯಾರ್ಥಿಗಳು ಪ್ರತಿ ವಿಷಯಕ್ಕೆ ರೂ. 250 ಪಾವತಿಸಬೇಕಿದೆ.