ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ
ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
Published: 08th May 2023 01:04 PM | Last Updated: 08th May 2023 01:04 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಎಸ್‌ಡಿಪಿಐ ವಾಹನ ಮತ್ತು ಕಾಂಗ್ರೆಸ್‌ನ ಪ್ರಚಾರ ವಾಹನ ಮುಖಾಮುಖಿಯಾದ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಸ್‌ಡಿಪಿಐ ಕಾರ್ಯಕರ್ತರು ಆಯೋಜಿಸಿದ್ದ ಬೈಕ್ ಮತ್ತು ರಿಕ್ಷಾ ರ‍್ಯಾಲಿಯಿಂದ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾದ ಕಾರಣ ಕಾಂಗ್ರೆಸ್ ಪ್ರಚಾರ ವಾಹನದ ಚಾಲಕ ಹಾರ್ನ್ ಮಾಡಿದ್ದಾರೆ ಮತ್ತು ಪ್ರಚಾರ ಗೀತೆಯನ್ನು ಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಎಸ್‌ಡಿಪಿಐ ಕಾರ್ಯಕರ್ತರು ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಗಲಾಟೆಯಲ್ಲಿ ಗಾಯಗೊಂಡ ನೌಫಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಪೊಲೀಸರು ನೌಫಲ್ ಮೇಲೆ ಹಲ್ಲೆ ನಡೆಸಿದ ಗುಂಪಿನ ಭಾಗವಾಗಿದ್ದ ಎಸ್‌ಡಿಪಿಐ ಕಾರ್ಯಕರ್ತನನ್ನು ಬಂಧಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ದೇರಳಕಟ್ಟೆಯಲ್ಲಿ ಎಸ್‌ಡಿಪಿಐ ಸಮಾವೇಶ ನಡೆಯುವ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಿಯಾಝ್ ಫರಂಗಿಪೇಟೆ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯುಟಿ ಖಾದರ್ ಅವರು ಬಿಜೆಪಿಯ ಸತೀಶ್ ಕುಂಪಲ ಅವರ ಎದುರಿಗೆ ಕಣಕ್ಕಿಳಿಸಿದ್ದಾರೆ.