ಕರ್ನಾಟಕದಲ್ಲಿ ಭಯ ಹುಟ್ಟಿಸುವ ಮಟ್ಟದಲ್ಲಿ ಭ್ರಷ್ಟಾಚಾರ, ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ: ಗುತ್ತಿಗೆದಾರ ಸಂಘ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಜನರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದ್ದು, ಬುಧವಾರ ಮತ ಚಲಾಯಿಸುವ ರಾಜ್ಯದಲ್ಲಿ ಭ್ರಷ್ಟಾಚಾರವು ಭಯಾನಕ ಮಟ್ಟಕ್ಕೆ ತಲುಪಿದೆ ಎಂಬುದನ್ನು ನೆನಪಿಸುತ್ತಿದೆ.
Published: 09th May 2023 08:48 PM | Last Updated: 09th May 2023 08:48 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಜನರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದ್ದು, ಬುಧವಾರ ಮತ ಚಲಾಯಿಸುವ ರಾಜ್ಯದಲ್ಲಿ ಭ್ರಷ್ಟಾಚಾರವು ಭಯಾನಕ ಮಟ್ಟಕ್ಕೆ ತಲುಪಿದೆ ಎಂಬುದನ್ನು ನೆನಪಿಸುತ್ತಿದೆ.
ಕೆಎಸ್‌ಸಿಎ ಅಧ್ಯಕ್ಷ ಡಿ ಕೆಂಪಣ್ಣ ಅವರು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗುತ್ತಿಗೆದಾರರು ಕಾಮಗಾರಿಗಳಿಗಾಗಿ ಶೇಕಡಾ 40ರಷ್ಟು ಕಮಿಷನ್ ನೀಡಬೇಕಿದೆ ಎಂದು ಆರೋಪಿಸಿದ್ದರು. ಇನ್ನು ಇದನ್ನೇ ಕರ್ನಾಟಕದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಗುರಿಯಾಗಿಸಲು ಕಾಂಗ್ರೆಸ್ ಪ್ರಮುಖ ಪ್ರಚಾರ ವಿಷಯವನ್ನಾಗಿ ಮಾಡಿಕೊಂಡಿದೆ.
ಕೆಂಪಣ್ಣ ಇಂದು ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ ಭಯ ಹುಟ್ಟಿಸುವ ಮಟ್ಟಕ್ಕೆ ತಲುಪಿದೆ. ಸಾರ್ವಜನಿಕ ಯೋಜನೆಗಳಲ್ಲಿನ ಶೇಕಡಾ 40ರಷ್ಟು ಕಮಿಷನ್ ಒತ್ತಡದ ಹಿನ್ನೆಲೆಯಲ್ಲಿ ಹಲವಾರು ಗುತ್ತಿಗೆದಾರರು ಅದಾಗಲೇ ಜೀವ ಕಳೆದುಕೊಂಡಿದ್ದಾರೆ. ಸಾರ್ವಜನಿಕರೂ ಸಹ ದೋಷಯುಕ್ತ, ಅಪಾಯಕಾರಿ ಮತ್ತು ಜೀವಕ್ಕೆ ಅಪಾಯಕಾರಿಯಂತ ಮೂಲಸೌಕರ್ಯಗಳೊಂದಿಗೆ ಬದುಕಲು ಒತ್ತಾಯಿಸಲ್ಪಟ್ಟಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಕರ್ನಾಟಕ ಚುನಾವಣೆ: ಒಟ್ಟು 375 ಕೋಟಿ ರೂ. ನಗದು, ವಸ್ತು ವಶ; ಕಳೆದ ಬಾರಿಗಿಂತ 4.5 ಪಟ್ಟು ಹೆಚ್ಚಳ!
ಜನರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದಾಗ ಪ್ರಜಾಪ್ರಭುತ್ವ ಕೆಲಸ ಮಾಡುತ್ತದೆ. ಭ್ರಷ್ಟಾಚಾರವು ನಮ್ಮ ಸಾಮೂಹಿಕ ಆತ್ಮಸಾಕ್ಷಿಯನ್ನು ಆಳವಾಗಿ ನೋಯಿಸುತ್ತದೆ ಎಂದು ಕೆಂಪಣ್ಣ ಹೇಳಿದ್ದಾರೆ.
ಕೆಂಪಣ್ಣ ಅವರೇ ಬರೆದಿರುವ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದು, ‘ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಈ ಪತ್ರವು 40ರಷ್ಟು ಕಮಿಷನ್ ಭ್ರಷ್ಟ ಸರ್ಕಾರ ಹೇಗೆ ಕರ್ನಾಟಕವನ್ನು ಹಾಳು ಮಾಡಿದೆ ಎಂಬುದಕ್ಕೆ ಪ್ರಜ್ಞಾಪೂರ್ವಕವಾಗಿ ತಿಳಿದು ಮತ ಚಲಾಯಿಸುವಂತೆ ಒತ್ತಾಯಿಸಿದೆ.