ಚುನಾವಣೋತ್ತರ ಸಮೀಕ್ಷೆ ಶೇ 100ರಷ್ಟು ಸರಿಯಾಗಿ ಇರುವುದಿಲ್ಲ: ಸಿಎಂ ಬೊಮ್ಮಾಯಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದೆ. ಈ ಮಧ್ಯೆ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಹಾವೇರಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದೆ. ಈ ಮಧ್ಯೆ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂಬ ಮಾಹಿತಿಗಳು ಹೊರಬೀಳುತ್ತಿದ್ದು ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಇಂದು ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಚುನಾವಣೋತ್ತರ ಸಮೀಕ್ಷೆಗಳು ಶೇಕಡ 100ರಷ್ಟು ಸರಿಯಾಗಿ ಇರುವುದಿಲ್ಲ. ನೈಜ ಫಲಿತಾಂಶ ಬರುವಾಗ ಪ್ಲಸ್‌-ಮೈನಸ್‌ ಆಗುತ್ತವೆ. ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೋಲ್ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಎಲ್ಲ 224 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದೆ. ಸಂಜೆ 5 ಗಂಟೆ ಸುಮಾರಿಗೆ ಶೇ 65.69 ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದ್ದು, ಅಂತಿಮ ಲೆಕ್ಕಾಚಾರ ಇನ್ನಷ್ಟೇ ಹೊರಬರಬೇಕಿದೆ.

ಚುನಾವಣೋತ್ತರ ಸಮೀಕ್ಷೆಗಳ ಪಟ್ಟಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com