ರಾಜ್ಯ ವಿಧಾನಸಭೆ ಚುನಾವಣೆ 2023: ಈವರೆಗೆ ಶೇ.37.25ರಷ್ಟು ಮತದಾನ, ಉಡುಪಿಯಲ್ಲಿ ಅತಿಹೆಚ್ಚು!
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.37.25ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.
Published: 10th May 2023 10:05 AM | Last Updated: 10th May 2023 02:08 PM | A+A A-

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿರುವ ಪಿಂಕ್ ಮತಗಟ್ಟೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.37.25ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.
ಬೆಂಗಳೂರು ಸೆಂಟ್ರಲ್ ಶೇಕಡಾ 29.41ರಷ್ಟು, ಬೆಂಗಳೂರು ಉತ್ತರ ಶೇಕಡಾ 29.90ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 30.68ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇಕಡಾ 40.87ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 40.16ರಷ್ಟು, ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡಾ 31.54ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 37.48ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 39.74ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 37.11ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 36.55ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 30.63ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 40.15ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 41ರಷ್ಟು ಮತದಾನವಾಗಿದ್ದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 36.41ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 44.17ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 38.64ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 36.14ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 38.98ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 40.84ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 36.74ರಷ್ಟು ಮತದನಾನವಾಗಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಶೇಕಡಾ 45.64ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 36.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 39.94ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 39.38ರಷ್ಟು, ಮೈಸೂರು ಜಿಲ್ಲೆಯಲ್ಲಿ ಶೇಕಡಾ 36.73ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 38.20ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇಕಡಾ 42.52ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 41.02ರಷ್ಟು, ತುಮಕೂರು ಜಿಲ್ಲೆಯಲ್ಲಿ ಶೇಕಡಾ 40.60ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 47.79ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 42.43ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 39.56ರಷ್ಟು ಮತದನಾನವಾಗಿದ್ದರೆ, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 35.68ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
#KarnatakaPollsWithTNIE #Live: Fake voters from Chincholi who were brought to cast votes in Vijayapura city were caught by Congress workers at 1 pm. A video footage of fake voters has gone viral.
— TNIE Karnataka (@XpressBengaluru) May 10, 2023
Reporting from ground @naushadbijapur @NewIndianXpress pic.twitter.com/OO4pCZcqSN
ಚುನಾವಣಾ ಅಖಾಡಕ್ಕಿಳಿದಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಬಹುದಾಗಿದೆ.
ಚುನಾವಣಾ ಆಯೋಗ ಬೆಂಗಳೂರಿನ ಮತಗಟ್ಟೆಯ ಸುತ್ತ ಸಿಸಿ ಕ್ಯಾಮಾರ ಅಳವಡಿಕೆ ಮಾಡಿದ್ದು, ಜಿಲ್ಲಾ ಚುನಾವಣಾ ಆಯೋಗ ಪ್ರತಿ ಮತಗಟ್ಟೆಗೆ 5 ಜನ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.
#KarnatakaPollsWithTNIE#InTumakuru Rural #Hirehalli #Sakhi polling station records 30 per cent by 12 .15 p.m. @XpressBengaluru@AshwiniMS_TNIE@NamrataSindwani pic.twitter.com/uHOPrnSVPr
— Devaraj Hirehalli Bhyraiah (@swaraj76) May 10, 2023
ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ಅಂಗವಿಕಲರಿಗೆ ಸುಲಭವಾಗಿ ಮತದಾನ ಮಾಡಲು ವ್ಯವಸ್ಥೆಗಳನ್ನು ಮಾಡಿದೆ.
ಮೈಸೂರಿನಲ್ಲಿ ಬಿರುಸಿನ ಮತದಾನ
ಮೈಸೂರು ಜಿಲ್ಲೆಯಲ್ಲಿ ಬಿಗಿ ಭದ್ರತೆಯೊಂದಿಗೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಜನತೆ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಹಕ್ಕು ಚಲಾಯಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 2,905 ಮತಗಟ್ಟೆಗಳಿದ್ದು, 13,17,121 ಪುರುಷ ಮತದಾರರು, 13,38,637 ಮಹಿಳಾ ಮತದಾರರು ಹಾಗೂ 230 ಇತರೆ ಮತದಾರರಿದ್ದು, ಒಟ್ಟು 26,55,988 ಮತದಾರರಿದ್ದಾರೆ.
#KarnatakaPollsWithTNIE#InVaruna
— TNIE Karnataka (@XpressBengaluru) May 10, 2023
Ex CM @siddaramaiah , son and MLA Yathindra with family members cast their vote at native #Siddaramanahundi in #Varuna constituency pic.twitter.com/jsZNp8WAIx
ಮೈಸೂರು ಜಿಲ್ಲೆಯಲ್ಲಿ ಚಾಮರಾಜ, ಕೃಷ್ಣರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಕೆಆರ್ ನಗರ, ಪಿರಿಯಾಪಟ್ಟಣ, ವರುಣಾ, ಹುಣಸೂರು, ನಂಜನಗೂಡು, ಟಿ ನರಸೀಪುರ ಮತ್ತು ಎಚ್‌ಡಿ ಕೋಟೆ ಸೇರಿ ಒಟ್ಟು 11 ಕ್ಷೇತ್ರಗಳಿವೆ.
ಜಿಲ್ಲೆಯಲ್ಲಿ 385 ಸೂಕ್ಷ್ಮ ಮತಗಟ್ಟೆಗಳಿದ್ದು, ಈ ಪೈಕಿ 252 ಮತಗಟ್ಟೆಗಳು ಮೈಸೂರು ನಗರದಲ್ಲಿದೆ. ಸಿದ್ದರಾಮಯ್ಯ ಹಾಗೂ ವಿ ಸೋಮಣ್ಣ ಅವರು ಕಣಕ್ಕಿಳಿದಿರುವ ವರುಣಾ ಕ್ಷೇತ್ರದಲ್ಲಿ 54 ಸೂಕ್ಷ್ಮ ಮತಗಟ್ಟೆಗಳಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದೆ.
ಮತದಾನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು 5620 ಇವಿಎಂಗಳು, 4266 ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯಂತ್ರಗಳು, 3936 ಕಂಟ್ರೋಲ್ ಯೂನಿಟ್‌ಗಳು ಮತ್ತು ಶಾಯಿ ಬಾಟಲಿಗಳ ವ್ಯವಸ್ಥೆ ಮಾಡಿದೆ.
A total of 5,71,281 Persons with Disabilities figure amg the 5.3 cr voters across Karnataka. Very catchy and informative infographic by the @ECISVEEP @KannadaPrabha @XpressBengaluru @NewIndianXpress @KannadaPrabha pic.twitter.com/ypN3tcXsti
— S. Lalitha (@Lolita_TNIE) May 10, 2023
ಮತದಾನ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ 2400 ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲೆಯಲ್ಲಿ 800 ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್, ಜಿಲ್ಲಾ ಮತ್ತು ನಗರ ಸಶಸ್ತ್ರ ಮೀಸಲು ಮತ್ತು ಕಮಾಂಡೋ ಪಡೆಗಳು ಸೇರಿದಂತೆ 2514 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.