
ಮಿಥುನ್ ರೈ
ಮಂಗಳೂರು: ವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.
ರಾಜ್ಯದ ಹಲವೆಡೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ, ಕಲ್ಲು ತೂರಾಟ ನಡೆದಿದೆ. ಈ ನಡುವೆ ನಗರ ಹೊರವಲಯದ ಮೂಡುಶೆಡ್ಡೆ ಬಳಿ ಬುಧವಾರ ರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಮೂಲ್ಕಿ ಮೂಡಬಿದರೆ ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.
ಮಿಥುನ್ ರೈ ಬೂತ್ ಗೆ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆ ಶುರುವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಕೂಡ ಕಲ್ಲು ತೂರಾಟ ನಡೆಸಲಾಗಿದೆ. ಭದ್ರತೆಗಾಗಿ ಸ್ಥಳದಲ್ಲಿ ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
Clash breaks out between BJP, Congress workers at Moodshedde in Moodbidri. Cong workers accuse BJP workers of pelting stones at Moodbidri candidate Mithun Rai's car while he visited a booth. Police vehicles also damaged @XpressBengaluru @vinndz_TNIE @ramupatil_TNIE @TheMithunRai pic.twitter.com/RnL6602vaL
— Divya Cutinho_TNIE (@cutinha_divya) May 10, 2023