ಕಳೆದ ಬಾರಿಯ ಸಮೀಕ್ಷೆಗಳು ಕೂಡ ಕಾಂಗ್ರೆಸ್​ ಪರವೇ ಇದ್ದವು, ಫಲಿತಾಂಶದ ದಿನ ಉಲ್ಟಾ ಆಗಿತ್ತು: ಸಿಎಂ ಬೊಮ್ಮಾಯಿ

ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈ ಬಾರಿಯೂ ಅದೇ ರೀತಿ ಆಗಲಿದ್ದು, ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಹುಬ್ಭಳ್ಳಿ: ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈ ಬಾರಿಯೂ ಅದೇ ರೀತಿ ಆಗಲಿದ್ದು, ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಿಗ್ಗಾವಿ ಜನತೆ ನನ್ನ ಮೇಲೆ ತೋರಿದ ಪ್ರೀತಿಗೆ ನಾನು ಚಿರಖುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತರ, ಅಪಪ್ರಚಾರ ಮಾಡಿದರೂ ಅದೆಲ್ಲವೂ ನಿನ್ನೆಗೆ ಮುಗಿದಿದೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆಂದು ಹೇಳಿದರು.

ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ, ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ತಿಳಿಸಿದರು.

ಇದೇ ವೇಳೆ ಅತಂತ್ರ ಎಂಬ ಪ್ರಶ್ನೆಯೇ ಬರುವುದಿಲ್ಲ. 150 ಸ್ಥಾನ ಗೆಲ್ಲುತ್ತೇವೆಂದು ಎಲ್ಲಿಯೂ ಹೇಳಿಲ್ಲ. ಆದರೆ, ಬಹುಮತ ಎಂದು ಹೇಳಿದ್ದೆ. ಈಗಲೂ ಅದೇ ಹೇಳಿಕೆಗೆ ಬದ್ಧನಾಗಿದ್ದೇನೆಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ನಡುವೆ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ್ದು, ಭೇಟಿ ವೇಳೆ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಇನ್ನು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ, ಗೆಲ್ಲುವುದು ನಾವೇ. ಕರ್ನಾಟಕ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ. ಸರ್ಕಾರ ರಚನೆ ಮಾಡುವುದು ಖಚಿತ. ಬಿಜೆಪಿಗೆ 115 ರಿಂದ 117 ಸ್ಥಾನ ಬಂದೇ ಬರುತ್ತದೆ. ಜೆಡಿಎಸ್​ ಜೊತೆ ಯಾವುದೇ ಮಾತುಕತೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com