ತುಮಕೂರು: ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬ ಗುರುವಾರ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಕೊಲ್ಲಲು ಯತ್ನಿಸಿ, ಬಳಿಕ ಕಲ್ಯಾಣಿಯಲ್ಲಿ ಮುಳುಗಿ ಆತ್ಮಹತ್ಯೆ
Published: 12th May 2023 08:32 AM | Last Updated: 12th May 2023 04:51 PM | A+A A-

ಸಾಂದರ್ಭಿಕ ಚಿತ್ರ
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬ ಗುರುವಾರ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಕೊಲ್ಲಲು ಯತ್ನಿಸಿ, ಬಳಿಕ ಕಲ್ಯಾಣಿಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಯುವಕನನ್ನು ಬಿ.ಎಸ್.ವಿನಯ್ ಕುಮಾರ್ ಎಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ಅರ್ಚಕನಾಗಿದ್ದರು. ವಿನಯ್ ಕುಮಾರ್, ಇತ್ತೀಚಿಗಷ್ಟೇ ದ್ವಿತೀಯ ಪಿಯುಸಿ ಪಾಸ್ ಆಗಿದ್ದ ಕೆ ಜೀವಿತಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಆತನ ಪ್ರೀತಿಯನ್ನು ಯುವತಿ ತಿರಸ್ಕರಿಸಿದ್ದರಿಂದ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನು ಓದಿ: ತುಮಕೂರು: ಬೈಕ್‌ಗೆ ಕೇರಳ ಕಾರ್ ಡಿಕ್ಕಿಯಾಗಿ ದಂಪತಿ ದುರ್ಮರಣ
ವಿನಯ್ ಕುಮಾರ್, ಜೀವಿತಾ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಆಕೆಗೆ ಗಂಭೀರ ಗಾಯಗಳಾಗಿವೆ. ಸದ್ಯ ಯುವತಿ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಈ ಸಂಬಂಧ ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.