ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್: 'ಕೈ' ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ನಾಳೆ ಸಿಎಲ್'ಪಿ ಸಭೆ!
ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ ಸ್ಪಷ್ಟ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ 129 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ದಾಟಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
Published: 13th May 2023 12:55 PM | Last Updated: 13th May 2023 12:55 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ ಸ್ಪಷ್ಟ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ 129 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ದಾಟಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
ಇಂದು ಮಧ್ಯಾಹ್ನದ ವೇಳೆಗೆ ಫಲಿತಾಂಶದ ಚಿತ್ರಣ ದೊರಕುವ ನಿರೀಕ್ಷೆಯಿದ್ದು, ಸಂಜೆಯ ವೇಳೆಗೆ ಸ್ಪಷ್ಟ ಚಿತ್ರಣ ದೊರಕಲಿದೆ. ಇನ್ನು ಪ್ರಮುಖ ಅಂಶ ಅಂದರೆ ಕಾಂಗ್ರೆಸ್ ಆರಂಭದಲ್ಲಿ ಭಾರೀ ಮುನ್ನಡೆ ಸಾಧಿಸುವುದರೊಂದಿಗೆ ಮ್ಯಾಜಿಕ್ ನಂಬರ್'ನ್ನು ದಾಟಿದೆ. ಹೀಗಾಗಿ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಮುನ್ನಡೆ ಸಾಧಿಸುವ ಕ್ಷೇತ್ರದಲ್ಲಿ ಗೆಲುವು ದೃಢಪಟ್ಟರೆ ಕಾಂಗ್ರೆಸ್ ಪಕ್ಷವು ನಾಳೆ ಬೆಳಿಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Congress Legislative Party (CLP) meeting called tomorrow morning in Bengaluru as the party crosses the majority mark and surges ahead in 118 seats in #KarnatakaElectionResults. pic.twitter.com/ql2FEDQOHj
— ANI (@ANI) May 13, 2023
ಈ ಹಿನ್ನೆಲೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರನ್ನು ಬೆಂಗಳೂರಿಗೆ ಕರೆತರಲು ವಿಶ್ವಾಸಾರ್ಹ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಬೆಂಗಳೂರಿಗೆ ಬರುವ ಶಾಸಕರ ಸಮಕ್ಷಮ ಶಾಸಕಾಂಗ ಪಕ್ಷದ ಸಭೆ ನಡೆಸಿ, ನಂತರ ಕಾಂಗ್ರೆಸ್‌ಗೆ ಸುರಕ್ಷಿತ ವಾತಾವರಣ ಇರುವ ರಾಜಸ್ಥಾನ ಅಥವಾ ಇತರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಕ್ಕೆ ಶಾಸಕರನ್ನು ಕಳುಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಒಟ್ಟಿನಲ್ಲಿ ಸದ್ಯದ ಟ್ರೆಂಡ್ ನೋಡಿದರೆ ಆರಂಭದಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ (129) ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಅಲ್ಲದೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಭ್ರಮಚಾರಣೆ ಮುಗಿಲು ಮುಟ್ಟಿದೆ.