ಗೆಲುವಿನ ಸಂಭ್ರಮದಲ್ಲಿ ರಾಮನಗರದಲ್ಲಿ ರೋಡ್ ಶೋ ನಡೆಸಿದ ಡಿಕೆಶಿ! ವಿಡಿಯೋ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
Published: 13th May 2023 03:18 PM | Last Updated: 13th May 2023 07:44 PM | A+A A-

ಡಿಕೆ ಶಿವಕುಮಾರ್
ರಾಮನಗರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆ ರಾಮನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ರೋಡ್ ಶೋ ನಡೆಸುವ ಮೂಲಕ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ನಂತರ, ಚುನಾವಣಾಧಿಕಾರಿಗಳಿಂದ ಚುನಾವಣೆಯಲ್ಲಿ ಗೆದ್ದ ಪ್ರಮಾಣ ಪತ್ರವನ್ನು ಡಿಕೆ ಶಿವಕುಮಾರ್ ಪಡೆದರು. ಸಂಸದ ಡಿ.ಕೆ. ಸುರೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಕಾಂಗ್ರೆಸ್ಗೆ ಅಭೂತಪೂರ್ವ ಗೆಲುವು: ಡಿಕೆ ಶಿವಕುಮಾರ್ ಭಾವುಕ
#WATCH | Party workers hail Karnataka Congress President DK Shivakumar as the party triumphs in the state, in Ramnagara pic.twitter.com/9QkE1Qxlev
— ANI (@ANI) May 13, 2023
ಇದಕ್ಕೂ ಮುನ್ನಾ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಮಗೆ ದೇಗುಲವಿದ್ದಂತೆ. ನಮ್ಮ ಮುಂದಿನ ನಡೆ ಕುರಿತು ಪಕ್ಷದ ಕಚೇರಿಯಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಪಕ್ಷದ ಗೆಲುವಿಗೆ ಕಾರಣರಾದ ಎಲ್ಲಾ ಕಾರ್ಯಕರ್ತರು, ಸಿದ್ದರಾಮಯ್ಯ ಸೇರಿ ಎಲ್ಲಾ ನಾಯಕರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆಂದು ಹೇಳಿದರು.