ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶಯಲ್ಲಿ ಅಭೂತಪೂರ್ವ ಗೆಲುವಿನತ್ತ ಕಾಂಗ್ರೆಸ್ ಸಾಗಿದ್ದು, ಕಾಂಗ್ರೆಸ್ ಪಕ್ಷದ ಸಾಧನೆ ಕುರಿತು ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ತೆಕ್ಕೆಗೆ ಕರ್ನಾಟಕ ತರುವುದಾಗಿ ಪ್ರಮಾಣ ಮಾಡಿದ್ದೆ. ಜೈಲಿಗೆ ಬಂದು ಸೋನಿಯಾ ಅವರು ನನ್ನನ್ನು ಭೇಟಿ ಮಾಡಿದ್ದನ್ನು ಮರೆಯಲಾರೆ ಎಂದು ಭಾವುಕರಾದರು.
ಕಾಂಗ್ರೆಸ್ ಕಚೇರಿ ನಮಗೆ ದೇಗುಲವಿದ್ದಂತೆ. ನಮ್ಮ ಮುಂದಿನ ನಡೆ ಕುರಿತು ಪಕ್ಷದ ಕಚೇರಿಯಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಪಕ್ಷದ ಗೆಲುವಿಗೆ ಕಾರಣರಾದ ಎಲ್ಲಾ ಕಾರ್ಯಕರ್ತರು, ಸಿದ್ದರಾಮಯ್ಯ ಸೇರಿ ಎಲ್ಲಾ ನಾಯಕರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆಂದು ಹೇಳಿದರು.
Advertisement