ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ: ಹೆಚ್‌ಡಿ.ಕುಮಾರಸ್ವಾಮಿ
ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.
Published: 13th May 2023 01:30 PM | Last Updated: 13th May 2023 07:47 PM | A+A A-

ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಶ್ರೀ ಹೆಚ್.ಡಿ.ದೇವೇಗೌಡರು, ಶ್ರೀ ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆಂದು ತಿಳಿಸಿದ್ದಾರೆ.