ಒಂದು ಡಿಸಿಎಂ ಹುದ್ದೆ, ಐವರು ಮುಸ್ಲಿಂ ಶಾಸಕರನ್ನು ಮಂತ್ರಿ ಮಾಡಬೇಕು: ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇಕಡ 88ರಷ್ಟು ಮುಸ್ಲಿಂರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಬಹುಮತ ಬಂದಿದ್ದು ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಐವರನ್ನು ಮಂತ್ರಿ ಮಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಆಗ್ರಹಿಸಿದ್ದಾರೆ.
ಶಾಫಿ ಸಅದಿ
ಶಾಫಿ ಸಅದಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇಕಡ 88ರಷ್ಟು ಮುಸ್ಲಿಂರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಬಹುಮತ ಬಂದಿದ್ದು ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಐವರನ್ನು ಮಂತ್ರಿ ಮಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಶೇ 90 ರಷ್ಟು ಮುಸ್ಲಿಮರಿದ್ದಾರೆ. ಅದರಲ್ಲಿ ಶೇ 88ರಷ್ಟು ಮುಸ್ಲಿಂರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಎಲ್ಲಾ ಮಸೀದಿಗಳಲ್ಲಿ ಅಭಿಯಾನ, ಜಾಗೃತಿ ಮಾಡಿದ್ದೆವು. ಹೀಗಾಗಿ ರಾಜ್ಯದಲ್ಲಿ 73 ಶಾಸಕರು ಗೆಲ್ಲಲು ಮುಸ್ಲಿಂರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಶಾಫೀ ಸಅದಿ ಹೇಳಿದ್ದಾರೆ.

ಕರ್ನಾಟಕದ ಎಲ್ಲಾ 224 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಮುಸ್ಲಿಂರು ಎಲೆಕ್ಷನ್​ಗೆ ನಿಂತಿದ್ದರು. ಅದರಲ್ಲಿ 9 ಜನರು ಗೆದ್ದಿದ್ದಾರೆ. ಈ ಹಿಂದೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐದು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ನೀಡಬೇಕು ಎಂದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನ ಗಳಿಸಿ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಇತರರು ಮೂರು ಕಡೆ ಗೆಲುವು ಸಾಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com