ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, 4 ಮಂದಿಗೆ ಗಾಯ, ಓರ್ವ ಸಾವು

ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ನಾಲ್ವರಿಗೆ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಸ್ತೆ ಅಪಘಾತ
ರಸ್ತೆ ಅಪಘಾತ
Updated on

ಬೆಂಗಳೂರು: ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ನಾಲ್ವರಿಗೆ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 
ಮೃತ ವ್ಯಕ್ತಿಯನ್ನು 36 ವಯಸ್ಸಿನ ಮುರಳೀಧರ್ ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇತರ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

11:30 ರ ವೇಳೆಗೆ  ಮುರಳೀಧರ್ ಎಂಬುವವರು ಕಾರಿನಲ್ಲಿ ಅವರ ಸ್ನೇಹಿತರೊಂದಿಗೆ ಹೊಸೂರು ಬಂಡೆಯಿಂದ ದೇವನಹಳ್ಳಿ ಮುಖ್ಯರಸ್ತೆ ಕಡೆಗೆ ಸಂಚರಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್‌ ನ್ನು ಜಿಗಿದು ಎದುರಿಗೆ ಪಲ್ಟಿಯಾಗಿದೆ.

ಮುರಳೀಧರ್ ಮುಂದಿನ ಸೀಟಿನಲ್ಲಿ ಕುಳಿತಿದ್ದು, ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಅಪಘಾತದ ಪರಿಣಾಮದಿಂದಾಗಿ, ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದರು, ಉಳಿದ ನಾಲ್ವರು ದೊಡ್ಡ ಗಾಯಗಳಿಲ್ಲದೆ ಬದುಕುಳಿದಿದ್ದಾರೆ. ಮುರಳೀಧರ್ ಅವರ ಮೃತದೇಹವನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ದೇವನಹಳ್ಳಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com