
ಸಾಂದರ್ಭಿಕ ಚಿತ್ರ
ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಎಮ್ಮೆಗಳು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಮಧ್ಯರಾತ್ರಿ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ.
ಗೂಡ್ಸ್ ರೈಲು ಕಂಕನಾಡಿ ನಿಲ್ದಾಣದಿಂದ ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್(ಎಂಸಿಎಫ್) ಕಡೆಗೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನು ಓದಿ: ಕೆಎಸ್‌ಆರ್ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಕೆಜಿ ಗಾಂಜಾ ವಶ!
ಸ್ಥಳಕ್ಕೆ ದೌಡಾಯಿಸಿದ ಕದ್ರಿ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮೂರು ಎಮ್ಮೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಮ್ಮೆಗಳಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಕೆಲವು ಎಮ್ಮೆಗಳು 25ಕ್ಕೂ ಹೆಚ್ಚು ಆಳದ ಕಮರಿಗೆ ಬಿದ್ದು ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ.