ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆ
ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ.
Published: 15th May 2023 12:07 PM | Last Updated: 15th May 2023 02:10 PM | A+A A-

ಡಾ. ಕೆ.ಸುಧಾಕರ್
ಚಿಕ್ಕಬಳ್ಳಾಪುರ: ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ.
ಕೋಟೆ ನಿವಾಸಿಯಾಗಿದ್ದ ಚಿತ್ತಾರ ವೆಂಕಟೇಶ್ ವಡ್ರೆಪಾಳ್ಯದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರು ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದರು.
ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಸುಧಾಕರ್ ಸೋಲನ್ನು ಕಂಡಿದ್ದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದ ಸುಧಾಕರ್ ವಿರುದ್ಧ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ 10,642 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ರಾಜಕಾರಣಕ್ಕೆ ಹೊಸದಾಗಿ ಪಾದಾರ್ಪಣೆ ಮಾಡಿ ತಿಂಗಳ ಕಾಲ ಚುನಾವಣಾ ಪ್ರಚಾರ ಮಾಡಿದ್ದ ಪ್ರದೀಪ್ ಈಶ್ವರ್ ಸುಧಾಕರ್ ಅವರನ್ನು ಮಣಿಸಿದ್ದು ಅಚ್ಚರಿಗೆ ಕಾರಣವಾಗಿದೆ.