ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಹಂಗಾಮಿ ಸಿಎಂ ಬೊಮ್ಮಾಯಿ ಅನೌಪಚಾರಿಕ ಮಾತುಕತೆ

ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ತಮ್ಮ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದರು. 
ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ
ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರು: ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ತಮ್ಮ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದರು. 

ಸಂವಿಧಾನ ಒಪ್ಪಿಕೊಂಡಿದ್ದೇವೆ, ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸಲಿದ್ದು, ಅದರಡಿ ಕೆಲಸ ಮಾಡುತ್ತಿದ್ದೇವೆ. ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ‌ ಎಂದರು.

ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದು ಅವರು ಹೇಳಿದರು.

ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ‌. ಜಿಎಸ್ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ‌. ಕರ್ನಾಟಕದ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com