ಡಿಕೆ ಶಿವಕುಮಾರ್ ಕ್ಷೇತ್ರ ಕನಕಪುರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಳ

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ...
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬೆಂಬಲಿಗರು ಅನೇಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಅವರ ತವರು ಜಿಲ್ಲೆ ರಾಮನಗರದಲ್ಲಿ ಮತ್ತು ಕನಕಪುರದಲ್ಲಿ ಬುಧವಾರ ಭದ್ರತೆ ಹೆಚ್ಚಿಸಲಾಗಿದೆ.

ರಾಮನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳು ಮತ್ತು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶಿವಕುಮಾರ್ ಅವರು ಮೇ 10 ರಂದು ಕರ್ನಾಟಕ ವಿಧಾನಸಭೆಗೆ ಮರು ಆಯ್ಕೆಯಾದ ನಂತರ ಕನಕಪುರದಲ್ಲಿ ವಿಶೇಷವಾಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸಿದ್ದರಾಮಯ್ಯ ಅವರು ನಾಳೆ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಅಂತಿಮವಾಗಿಲ್ಲ. ನಾಳೆ ಅಥವಾ ನಾಡಿದ್ದು ನೂತನ ಸಿಎಂ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com