'ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ದೊಡ್ಡ ವ್ಯಕ್ತಿ ಮಾಡುತ್ತೇವೆ ಅಂದರು: ಕೇಳಿಸಿಕೊಂಡ ಕೆಲವರು ನನಗೆ ಬಗನಿಗೂಟ ಇಟ್ಟರು'

ರಾಜ್ಯ ವಿಧಾನಸಭೆ ಚುನಾವಣೆ ವೇಳೆ ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ಅವರನ್ನು ದೊಡ್ಡ ವ್ಯಕ್ತಿ ಮಾಡುತ್ತೇವೆ  ಎಂದು ಅಮಿತ್ ಶಾ ಹೇಳಿದ್ದರು, ಇದನ್ನು ಕೇಳಿಸಿಕೊಂಡ ಕೆಲವರು ನನಗೆ ಬಗನಿಗೂಟ ಇಟ್ಟರು ಎಂದು ಮಾಜಿ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿ.ಸೋಮಣ್ಣ
ವಿ.ಸೋಮಣ್ಣ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ವೇಳೆ ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ಅವರನ್ನು ದೊಡ್ಡ ವ್ಯಕ್ತಿ ಮಾಡುತ್ತೇವೆ  ಎಂದು ಅಮಿತ್ ಶಾ ಹೇಳಿದ್ದರು, ಇದನ್ನು ಕೇಳಿಸಿಕೊಂಡ ಕೆಲವರು ನನಗೆ ಬಗನಿಗೂಟ ಇಟ್ಟರು ಎಂದು ಮಾಜಿ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕಿತ್ತು ಹಾಕಲಿ ಎಂದು ಚಾಮರಾಜನಗರ ಕ್ಷೇತ್ರ ಸೋಲಿನ ಕುರಿತು ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಕ್ಷೇತ್ರಕ್ಕೆ ಅವನು ಮೊದಲು ಬಂದಾಗಲೇ ಒಳಕ್ಕೆ ಬಿಡಬಾರದಿತ್ತು. ಮಠಗಳಿಗೆ ಅನುದಾನ ನೀಡಿ ಅದರಲ್ಲೇ ಕಮಿಷನ್ ಪಡೆದ. ನನ್ನ ವಿರುದ್ಧ ಜಾತಿ ಎತ್ತಿಕಟ್ಟಿದ, ನನ್ನ‌ ಮಗ ಇಲ್ಲಿಗೆ ಬರುತ್ತಾನೆ ಎಂದು ಕಥೆ ಕಟ್ಟಿದ‌. ನನ್ನ ವಿರುದ್ಧ ಅಪಪ್ರಚಾರ ಮಾಡಿದ. ಅವನ ಮಾತು ಕೇಳಿಕೊಂಡು ನನ್ನ ವಿರುದ್ಧ ಕೆಲವರು ಕುತಂತ್ರ ಮಾಡಿದರು. ಅವನಿಗೆ ಯಾರು ಹೇಳಿ ಕೊಟ್ಟರು ಎಂದು ನನಗೆ ಗೊತ್ತು. ಯಥಾರಾಜ ತಥ ಪ್ರಜೆ ಎಂದರು.

ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ... ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ... ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ  ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ. ಪಕ್ಷ ತಾಯಿಗೆ ಸಮಾನ  ಪಕ್ಷದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ?? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.

ನೀವೆಲ್ಲಾ ಬೆಂಗಳೂರಿಗೆ ಹೋಗಿ ಪಕ್ಷಕ್ಕೆ ದೂರು ಕೊಟ್ಟರೂ ಏನು ಪ್ರಯೋಜನವಿಲ್ಲ. ನಾನು ಕಾಂಗ್ರೆಸ್​​ನಲ್ಲಿ ಇದ್ದಿದ್ದಾಗ ನನ್ನ ಬೆಲೆ ಏನೆಂದು ಗೊತ್ತಾ, ಈಗಲೂ ನಾನು ಕಾಂಗ್ರೆಸ್​​ನಲ್ಲಿದ್ದರೆ ಹೇಗಿರುತ್ತಿದ್ದೆ ಗೊತ್ತಾ ಎಂದರು. ನಮ್ಮ ಸಮಾಜದವರು ಬೆಂಗಳೂರಿನಲ್ಲಿ ಕುಳಿತು ಆಟವಾಡಿಸುತ್ತಿದ್ದಾರೆ. ಇಲ್ಲಿಗೆ ಒಬ್ಬ ಬಂದು ಆಟವಾಡುತ್ತಿದ್ದಾನೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಸಮಯದಲ್ಲಿ ಯಡಿಯೂರಪ್ಪನವರು ಪ್ರತಿದಿನ ಕರೆ ಮಾಡ್ತಿದ್ರು, ಚುನಾವಣೆ ಮುಗಿದ ಮೇಲೆ ಒಂದು ಬಾರಿಯೂ ಫೋನ್ ಮಾಡಿಲ್ಲ ಎಂದು ಮಾಜಿ ಸಚಿವ ವಿ. ಸೋಮಣ್ಣ  ಬೇಸರ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com