ಬೆಂಗಳೂರು: ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಶೌಚಾಲಯದಲ್ಲಿ ವೈದ್ಯೆ ಶವವಾಗಿ ಪತ್ತೆ!

ಹೆಬ್ಬಗೋಡಿಯ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಶೌಚಾಲಯದಲ್ಲಿ ವೈದ್ಯೆಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೆಬ್ಬಗೋಡಿಯ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಶೌಚಾಲಯದಲ್ಲಿ ವೈದ್ಯೆಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದೆ.

ಮೃತ ವೈದ್ಯೆಯನ್ನು ತಮಿಳುನಾಡಿನ ತಂಜಾವೂರು ಮೂಲದ ಆರತಿ ಎಂದು ಗುರ್ತಿಸಲಾಗಿದೆ. ಆಸ್ಪತ್ರೆಯಲ್ಲಿ 2 ಗಂಟೆಗಳಿಂದ ವೈದ್ಯೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ನಂತರ ಶೌಚಾಲಯದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿತ್ತು.

ವಿಷಕಾರಿ ಚುಚ್ಚುಮದ್ದಿನಿಂದಾಗಿ ವೈದ್ಯೆ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಕರಣ ಸಂಬಂಧ ಆಸ್ಪತ್ರೆ ಹೇಳಿಕೆ ನೀಡಿದ್ದು, “ಮೇ 16 ರಂದು ಆಸ್ಪತ್ರೆಯ ಆವರಣದಲ್ಲಿ ವೈದ್ಯರೊಬ್ಬರು ಪ್ರಜ್ಞಾಹೀನ ಸ್ಥಿತಿ ಪತ್ತೆಯಾಗಿದ್ದರು. ಕೂಡಲೇ ಆಕೆಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಯಿತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಸಾವಿಗೆ ಕಾರಣಗಳು ತಿಳಿದುಬಂದಿಲ್ಲ. ಪೊಲೀಸರಿಗೆ ಈ ಸಂಬಂಧ ಮಾಹಿತಿ ನೀಡಲಾಯಿತು. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಸಂಪೂರ್ಣವಾಗಿ ಸ್ಪಂದಿಸುತ್ತೇವೆ. ಮೃತ ವೈದ್ಯೆ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com