ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!
ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
Published: 18th May 2023 09:52 AM | Last Updated: 18th May 2023 09:52 AM | A+A A-

ಎಚ್.ಡಿ ದೇವೇಗೌಡ
ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಪಕ್ಷದ ಅಭ್ಯರ್ಥಿಗಳು ಮತ್ತು ಪದಾಧಿಕಾರಿಗಳಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, ಫಲಿತಾಂಶದಿಂದ ಅವರೆಲ್ಲರಿಗೂ ಅಚ್ಚರಿ ಮತ್ತು ನಿರಾಶೆಯಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಫಲಿತಾಂಶ ಮತ್ತು ಪಕ್ಷವನ್ನು ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಸಭೆ ಕರೆಯುವಂತೆ ತಿಳಿಸಿದ್ದೇನೆ ಎಂದು ಗೌಡರು ಹೇಳಿದ್ದಾರೆ.
ಜೆಡಿಎಸ್ ಚುನಾವಣೆಯಲ್ಲಿ ಸೋತಿದ್ದರೂ ನಂತರ ಪುಟಿದೆದ್ದ ಹಿಂದಿನ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ ಮತ್ತು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಪ್ರೋತ್ಸಾಹಿಸಿದ್ದಾರೆ. ಏತನ್ಮಧ್ಯೆ, ಗುರುವಾರ ಗೌಡರ 91 ನೇ ಹುಟ್ಟುಹಬ್ಬವಿದ್ದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.