ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ನಿಯೋಗ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ನೇತೃತ್ವದ ನಿಯೋಗವು ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದೆ.
ಮುಖ್ಯಮಂತ್ರಿ ಘೋಷಣೆಯ ನಂತರ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಇಂದು ಸಂಜೆ ಸರ್ಕಾರ ರಚನೆಗೆ ಹಕ್ಕು ಸಾಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದಕ್ಕಾಗಿ ಕಾಂಗ್ರೆಸ್ ಶಾಸಕ ಜಿ ಪರಮೇಶ್ವರ ಅವರು ಪಕ್ಷದ ಪ್ರತಿನಿಧಿಯಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಕರ್ನಾಟಕದ ಗದ್ದುಗೆ ಗುದ್ದಾಟದಲ್ಲಿ ಮುಖ್ಯಮಂತ್ರಿ ಪಟ್ಟವನ್ನು ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟವನ್ನು ಸಿದ್ದರಾಮಯ್ಯ ತಮ್ಮದಾಗಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷವು ತಮ್ಮ ಸರ್ಕಾರ ರಚನೆ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ.
ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿಯಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ನಮಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ ಮನವಿ ಮಾಡಿಕೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ