ಗದಗ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ; ಅಪ್ರಾಪ್ತ ಬಾಲಕರಿಬ್ಬರು ಸ್ಥಳದಲ್ಲೇ ಸಾವು
ಸವಾರನ ನಿಯಂತ್ರಣ ತಪ್ಪಿ ಬೈಕ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತ ಬಾಲಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ನಡೆದಿದೆ.
Published: 19th May 2023 05:48 PM | Last Updated: 19th May 2023 05:48 PM | A+A A-

ಸಾಂದರ್ಭಿಕ ಚಿತ್ರ
ಗದಗ: ಸವಾರನ ನಿಯಂತ್ರಣ ತಪ್ಪಿ ಬೈಕ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತ ಬಾಲಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು 15 ವರ್ಷದ ಶ್ರೀಧರ ಗಡಗಿ ಹಾಗೂ 16 ವರ್ಷದ ಅನೂಪ್ ಕುಮಾರ ಇಟಗಿ ಎಂದು ಗುರುತಿಸಲಾಗಿದೆ. ಒಂದು ಬೈಕ್ ನಲ್ಲಿ ಮೂವರು ತೆರಲುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಶ್ರೀಧರ ಗಡಗಿ ಮತ್ತು ಅನೂಪ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮೌನೇಶ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಮೈಸೂರು: ಮಿನಿ ಬಸ್ ಪಲ್ಟಿ, ಹತ್ತು ಮಂದಿಗೆ ಗಾಯ
ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.